Latest

*ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ರಾಮಗೊಂಡನಹಳ್ಳಿ ಬಳಿ ನಡೆದಿದೆ.

ಟ್ರಾಕ್ಟರ್, ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಗಾಯಾಳುವನ್ನು ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

24 ವರ್ಷದ ಮಂಜುನಾಥ್ ಹಾಗೂ 23 ವರ್ಷದ ಅಮೃತ್ ಮೃತರು. ಗಾಯಾಳುವಿನ ಗುರುತು ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಭವಿಷ್ಯಕ್ಕಾಗಿ ಇತಿಹಾಸ ಅರಿಯುವ ವ್ಯಕ್ತಿಯಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ

Related Articles

Back to top button