ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಗ್ನಲ್ ಜಂಪ್ ಮಾಡಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬರು ಟ್ರಾಫಿಕ್ ಪೊಲೀಸ್ ಕೊರಳ ಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.
ಮೈಸೂರು ಬ್ಯಾಂಕ್ ವೃತ್ತದಲ್ಲಿ ಸಂಚಾರಿ ಎಸ್ ಎಸ್ ಐ ಬಸವಯ್ಯ ಎಂಬುವವರ ಮೇಲೆ ಉತ್ತರ ಪ್ರದೇಶ ಮೂಲದ ಮಹಿಳೆ ಹಲ್ಲೆ ನಡೆಸಿದ್ದು, ಮಹಿಳೆ ಅಪೂರ್ವಿ ವಿರುದ್ಧ ದೂರು ದಾಖಲಾಗಿದೆ.
ಮೈಸೂರು ಬ್ಯಾಂಕ್ ಮಾರ್ಗವಾಗಿ ಆಗಮಿಸಿದ ಅಪೂರ್ವಿ, ಸಿಗ್ನಲ್ ಜಂಪ್ ಮಾಡಿ ಮುಂದೆ ಸಾಗಿದ್ದಾರೆ. ಅವರನ್ನು ತಡೆದು ನಿಲ್ಲಿಸಿದ ಪೊಲೀಸರು ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸಿಟ್ಟಿಗೆದ್ದ ಮಹಿಳೆ ಎಎಸ್ ಐ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.
ಈ ಬಗ್ಗೆ ಉಪ್ಪಾರ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮಹಿಳೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ