CrimeKannada NewsKarnataka News

*ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರ್ಘಟನೆ: ಕೆರೆಯಲ್ಲಿ ಮುಳುಗಿ 6 ಬಾಲಕರ ಸಾವು*

ಪ್ರಗತಿವಾಹಿನಿ ಸುದ್ದಿ: ಹೈದರಾಬಾದ್‌‌ನ ಸಮೀಪದ ಪೆದ್ದ ಕಂಜರ್ಲ ಗ್ರಾಮದಲ್ಲಿ ಅಂತ್ಯತ ಭೀಕರ ದುರ್ಘಟನೆ ಸಂಭವಿಸಿದ್ದು, 6 ಜನ ಬಾಲಕರು ಸಾವನ್ನಪ್ಪಿದ್ದಾರೆ.

ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಆರು ಬಾಲಕರು ಮೃತಪಟ್ಟಿದ್ದಾರೆ. ದತ್ತಿ ಸಂಸ್ಥೆಯೊಂದು ನಡೆಸುತ್ತಿರುವ ಹಾಸ್ಟೆಲ್‌ನಲ್ಲಿ ಈ ಬಾಲಕರು ವಾಸವಾಗಿದ್ದರು ಎನ್ನಲಾಗಿದೆ. ಗಣೇಶ ಮೂರ್ತಿ ವಿಸರ್ಜನೆ ವೇಳೆ ಎಂಟು ಬಾಲಕರು ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದಾರೆ. ಈ ಪೈಕಿ ಇಬ್ಬರು ಈಜಿಕೊಂಡು ಹೊರಬಂದಿದ್ದು, ಉಳಿದ ಆರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

Home add -Advt

ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಪೊಲೀಸ್‌ ಕಾನ್ಸ್‌ಟೇಬಲ್‌ ಒಬ್ಬರು ಬಾಲಕನಿಗೆ ಸಿಪಿಆರ್ ನೀಡಿ ರಕ್ಷಿಸಲು ಪ್ರಯತ್ನಿಸಿದರೂ, ಬಾಲಕನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಬಾಲಕರು ಕೆರೆಗೆ ಬಿದ್ದ ವೇಳೆ ಅವರನ್ನು ರಕ್ಷಿಸಲು ತಕ್ಷಣ ನೆರವಿಗೆ ಧಾವಿಸುವ ಯಾವುದೇ ವಯಸ್ಕರು ಸ್ಥಳದಲ್ಲಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆರೆಯಲ್ಲಿದ್ದ ಕೆಸರು ಕೂಡ ಬಾಲಕರು ಮುಳುಗಲು ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಗಣೇಶ ಮೂರ್ತಿ ವಿಸರ್ಜನೆ ವೇಳೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ಒದಗಿಸುವಂತೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಘಟನೆಗೆ ತೆಲಂಗಾಣ ರಾಜ್ಯಪಾಲ ಶಿವ ಪ್ರತಾಪ್‌ ಶುಕ್ಲಾ, ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ. 

Related Articles

Back to top button