Kannada NewsKarnataka NewsNationalPolitics

*ಮಂತ್ರಾಲಯದಿಂದ ವಾಪಸ್ ಬರುವಾಗ ದುರಂತ: ಐವರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ : ಇಂದು ಬೆಳ್ಳಂ ಬೆಳಗ್ಗೆ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, 5 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕೋಟೆಕಲ್ ನಲ್ಲಿ ಸಂಭವಿಸಿದೆ.

ಅಪಘಾತದಲ್ಲಿ ಕೋಲಾರದ ಚಿಕ್ಕಹೊಸಳ್ಳಿ ಗ್ರಾಮದ 5 ಮಂದಿ ಮೃತಪಟ್ಟಿದ್ದಾರೆ. ಮೃತರ ಪೈಕಿ ಇಬ್ಬರು ಮಕ್ಕಳಿದ್ದರು ಎಂದು ಹೇಳಲಾಗಿದೆ.

Home add -Advt

ಮಂತ್ರಾಲಯದಿಂದ ರಾಘವೇಂದ್ರ ಸ್ವಾಮಿ ದರ್ಶನ ಮುಗಿಸಿ ವಾಪಸ್ ಬುರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಒಂದೇ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

Related Articles

Back to top button