National

*ದೋಣಿ ಮುಗುಚಿ ಬಿದ್ದು ಏಳು ಜನರ ದುರಂತ ಅಂತ್ಯ*

ಪ್ರಗತಿವಾಹಿನಿ ಸುದ್ದಿ: ದೋಣಿ ಮಗುಚಿ ನಾಲ್ವರು ಮಕ್ಕಳು ಸೇರಿದಂತೆ 7 ಮಂದಿ ಸಾವನಪ್ಪಿರುವ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಮಾತಾ ತಿಲಾ ಅಣೆಕಟ್ಟಿನಲ್ಲಿ ನಡೆದಿದೆ.

ಅಣೆಕಟ್ಟಿನ ಮಧ್ಯದಲ್ಲಿರುವ ಸಿದ್ಧ ಬಾಬಾ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ದೋಣಿ ಮಗುಚಿ ಮೂವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರು ಇದುವರೆಗೆ ಪತ್ತೆಯಾಗದ ಹಿನ್ನೆಲೆಯಲ್ಲಿ ಕಾಣೆಯಾಗಿದ್ದ ಎಲ್ಲಾ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ಮಾತಾ ತಿಲಾ ಅಣೆಕಟ್ಟಿನ ದ್ವೀಪದಲ್ಲಿರುವ ದೇವಸ್ಥಾನಕ್ಕೆ 15 ಜನರನ್ನು ದೋಣಿಯ ಮೂಲಕ ಕರೆದೊಯ್ಯುತ್ತಿದ್ದಾಗ ನೀರು ಒಳಗೆ ನುಗ್ಗಿ ಈ ಘಟನೆ ಸಂಭವಿಸಿದೆ. ಗ್ರಾಮಸ್ಥರ ಸಹಾಯದಿಂದ ಎಂಟು ಜನರನ್ನು ರಕ್ಷಿಸಲಾಗಿದೆ. ಆದರೆ 35 ರಿಂದ 55 ವರ್ಷ ವಯಸ್ಸಿನ ಮೂವರು ಮಹಿಳೆಯರು ಮತ್ತು ಏಳರಿಂದ 15 ವರ್ಷ ವಯಸ್ಸಿನ ನಾಲ್ಕು ಮಕ್ಕಳು ನೀರಿನಲ್ಲಿ ನಾಪತ್ತೆಯಾಗಿದ್ದಾರೆ. ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಡೈವರ್‌ಗಳನ್ನು ಒಳಗೊಂಡ ಶೋಧ ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button