CrimeKannada NewsKarnataka NewsNational
*ಘೋರ ದುರಂತ: ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಸಾವು*

ಪ್ರಗತಿವಾಹಿನಿ ಸುದ್ದಿ: ಇಂದು ಬೆಳ್ಳಂ ಬೆಳಗ್ಗೆ ಘೋರ ದುರಂತ ನಡೆದು ಹೋಗಿದೆ. ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಏಳು ಜನ ವಿದ್ಯಾರ್ಥಿಗಳ ಪೈಕಿ ನಾಲ್ವರು ಸಾವನ್ನಪ್ಪಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಾದೇವಪುರ ಬೋರೆ ಗ್ರಾಮದ ರಾಮಸ್ವಾಮಿ ನಾಲೆಯಲ್ಲಿ ಬಟ್ಟೆ ತೊಳೆಯಲೆಂದು ಹೋದಾಗ ಘಟನೆ ಸಂಭವಿಸಿದೆ.
ಮೈಸೂರಿನ ಉದಯಗಿರಿ ಹಜಿರ ನಿಶ್ವಾನ್ ಅರೇಬಿಕ್ ಶಾಲೆಯ ವಿದ್ಯಾರ್ಥಿಗಳು ಬಟ್ಟೆ ಒಗೆಯಲು ನಾಲೆಗೆ ತೆರಳಿದ್ದಾಗ ದುರಂತ ಸಂಭವಿಸಿದೆ.
7 ವಿದ್ಯಾರ್ಥಿಗಳು ತೆರಳಿದ್ದರು. ಈ ವೇಳೆ ಎಲ್ಲರೂ ಕೊಚ್ಚಿ ಹೋಗುತ್ತಿದ್ದಾಗ ಅವರಲ್ಲಿ ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಉಳಿದ ನಾಲ್ವರು ಸಾವನ್ನಪ್ಪಿದ್ದಾರೆ




