Kannada NewsKarnataka NewsLatest

*15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬರದಿಂದ ತತ್ತರಿಸಿದ್ದ ರಾಜ್ಯದ ಹಲವೆಡೆ ವರುಣ ಕೃಪೆ ತೋರಿದ್ದು, ಕಳೆದ ಮೂರ್ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

Home add -Advt

ತುಮಕೂರು, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರಗಳಲ್ಲಿ ಸಾಧಾರಣ ಮಳೆಯಾಗಲಿದೆ. ನವೆಂಬರ್ 12ವರೆಗೆ ಮಳೆಯಾಗಲಿದ್ದು, ಬಳಿಕ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button