Kannada NewsKarnataka NewsLatest

*ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ: 6 ಪ್ರಯಾಣಿಕರು ಸಾವು*

ಪ್ರಗತಿವಾಹಿನಿ ಸುದ್ದಿ: ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ.

ಛತ್ತೀಸ್ ಗಡದ ಬಿಲಾಸ್ ಪುರದ ಲಾಲ್ ಖಾದನ್ ಬಳಿ ಗೂಡ್ಸ್ ರೈಲು ಹಾಗೂ ಪ್ಯಾಸೇಂಜರ್ ರೈಲಿನ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಹಲವು ಬೋಗಿಗಳು ಹಳಿತಪ್ಪಿವೆ. ಘಟನೆಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button