
ಪ್ರಗತಿವಾಹಿನಿ ಸುದ್ದಿ: ಚೆನ್ನೈನಿಂದ ಬೆಂಗಳೂರಿಗೆ ಡೀಸೆಲ್ ಸಾಗಿಸುತ್ತಿದ್ದ ರೈಲಿನಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಕೆನ್ನಾಲಿಗೆಗೆ ಡೀಸೆಲ್ ಟ್ಯಾಂಕರ್ ಹೊತ್ತಿ ಉರಿದಿದೆ.
ತಿರುವಳ್ಳೂರು ರೈಲು ನಿಲ್ದಾಣದ ಬಳಿ ಈ ಅವಘಡ ಸಂಭವಿಸಿದೆ. ರೈಲು ನಿಲ್ದಾಣದಲ್ಲಿಯೂ ದಟ್ಟ ಹೊಗೆ ಆವರಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಅದಿಕಾರಿಗಳು ದೌಡಾಯಿಸಿ ಬೆಂಕಿ ನಿಯಂತ್ರಿಸಲು ಯತ್ನಿಸಿದ್ದಾರೆ.
ರೈಲಿನಲ್ಲಿ ಬೆಂಕಿ ಅವಘಡ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರು, ಮತ್ತು ಕೋಯಮತ್ತೂರು ನಡುವೆ ಸಂಚರಿಸುವ ಪ್ರಿಮಿಯಂ ಒಂದೇ ಭಾರತ್, ಶತಾಬ್ದಿ ಎಕ್ಸ್ ಪ್ರೆಸ್ ಸೇರಿದಂತೆ 8 ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.