
ಪ್ರಗತಿವಾಹಿನಿ ಸುದ್ದಿ, ಖಾನಾಪುರ : ತಾಲೂಕಿನ ಗುಂಜಿ ಅರಣ್ಯದ ಸಂಗರಗಾಳಿ ಗ್ರಾಮದ ಬಳಿ ಹಾದುಹೋಗಿರುವ ಬೆಳಗಾವಿ-ಲೋಂಡಾ ರೈಲು ಮಾರ್ಗದಲ್ಲಿ ಕಾಡುಕೋಣವೊಂದಕ್ಕೆ ಚಲಿಸುತ್ತಿದ್ದ ರೈಲು ಅಪ್ಪಳಿಸಿದ ಪರಿಣಾಮ ಕಾಡುಕೋಣ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ.
ಸುದ್ದಿ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾಡುಕೋಣದ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದು, ಬಳಿಕ ಗುಂಜಿ ಅರಣ್ಯದಲ್ಲಿ ಇಲಾಖೆಯ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲಾಗಿದೆ.
ಲೋಂಡಾ ವಲಯ ಅರಣ್ಯ ಅಧಿಕಾರಿಗಳ ಕಚೇರಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ ಎಂದು ಆರ್.ಎಫ್.ಒ ಪ್ರಶಾಂತ ಗೌರಾಣಿ ತಿಳಿಸಿದ್ದಾರೆ.
ಕೇಂದ್ರ ಸಚಿವ ನಾರಾಯಣ ರಾಣೆ ಪೊಲೀಸರ ವಶಕ್ಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ