Belagavi NewsBelgaum NewsKannada NewsKarnataka NewsTravel

*ಹುಬ್ಬಳ್ಳಿಯಿಂದ ರೈಲು ಸೇವೆ ಮತ್ತೆ ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ: ಬೇಸಿಗೆ ರಜೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚಿದ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಎಸ್‌ಎಸ್‌ಎಸ್ ಹುಬ್ಬಳ್ಳಿ ಹಾಗೂ ಪಶ್ಚಿಮ ಬಂಗಾಳದ ಅಲಿಪುರ್ ದ್ವಾರ್ ನಿಲ್ದಾಣಗಳ ನಡುವೆ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಈಗ  ಹೆಚ್ಚುವರಿಯಾಗಿ ಒಂದು ಟ್ರಿಪ್ ವಿಸ್ತರಣೆ ಮಾಡಲಾಗಿದೆ. 

ಈ ವಿಶೇಷ ರೈಲು ಬೆಂಗಳೂರು ಎಸ್‌ಎಂವಿಟಿ ಹಾಗೂ ಯಲಹಂಕ ಮಾರ್ಗವಾಗಿ ಸಂಚರಿಸಲಿದೆ.

ರೈಲು ಸಂಖ್ಯೆ 07323 ಎಸ್‌ಎಸ್‌ಎಸ್  ಹುಬ್ಬಳ್ಳಿ – ಅಲಿಪುರ್ ದ್ವಾರ್ ವಿಶೇಷ ಎಕ್ಸ್‌ಪ್ರೆಸ್ 2026ರ ಏಪ್ರಿಲ್ 22ರ ಬುಧವಾರ ರಾತ್ರಿ 11:15ಕ್ಕೆ ಹುಬ್ಬಳ್ಳಿಯಿಂದ ಹೊರಟು, ಶನಿವಾರ ಮಧ್ಯಾಹ್ನ 01:50ಕ್ಕೆ ಅಲಿಪುರ್ ದ್ವಾರ್ ತಲುಪಲಿದೆ. ಮರು ಪ್ರಯಾಣದಲ್ಲಿ ರೈಲು ಸಂಖ್ಯೆ 07324 ಅಲಿಪುರ್ ದ್ವಾರ್ – ಹುಬ್ಬಳ್ಳಿ ವಿಶೇಷ ಎಕ್ಸ್‌ಪ್ರೆಸ್ ಏಪ್ರಿಲ್ 26ರ ಭಾನುವಾರ ಸಂಜೆ 04:25ಕ್ಕೆ ಅಲಿಪುರ್ ದ್ವಾರ್‌ನಿಂದ ಹೊರಟು, ಬುಧವಾರ ಬೆಳಗ್ಗೆ 09:45ಕ್ಕೆ ಹುಬ್ಬಳ್ಳಿ ನಿಲ್ದಾಣ ತಲುಪಲಿದೆ.

ಈ ವಿಶೇಷ ರೈಲು ತನ್ನ ಪ್ರಯಾಣದ ಅವಧಿಯಲ್ಲಿ ದಾವಣಗೆರೆ, ಅರಸೀಕೆರೆ, ತುಮಕೂರು, ಎಸ್‌ಎಂವಿಟಿ ಬೆಂಗಳೂರು, ಯಲಹಂಕ, ಧರ್ಮಾವರಂ, ಡೋನ್, ನಂದ್ಯಾಲ, ಗುಂಟೂರು, ವಿಜಯವಾಡ, ರಾಜಮಂಡ್ರಿ, ಕೊಟ್ಟವಲಸ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಲಾಸ, ಬ್ರಹ್ಮಪುರ, ಖುರ್ದಾ ರೋಡ್, ಭುವನೇಶ್ವರ, ಕಟಕ್, ಭದ್ರಾಕ್, ಖರಗ್ಪುರ, ಅಂದುಲ್, ದನಕುಣಿ, ಬರ್ದ್ಧಮಾನ್, ಬೋಲ್ಪುರ್ (ಶಾಂತಿನಿಕೇತನ), ರಾಂಪುರ್ ಹಾಟ್, ನ್ಯೂ ಫರಕ್ಕಾ, ಮಾಲ್ಡಾ ಟೌನ್, ಬರಸೋಯಿ, ಕಿಶನ್‌ಗಂಜ್, ನ್ಯೂ ಜಲ್ಪೈಗುರಿ, ಸಿಲಿಗುರಿ, ಬಿನ್ನಗುರಿ ಹಾಗೂ ಹಸಿಮಾರಾ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

20 ಎಲ್‌ಎಚ್‌ಬಿ ಬೋಗಿಗಳನ್ನು ಹೊಂದಿರುವ ಈ ವಿಶೇಷ ರೈಲು ಎಸಿ 2-ಟೈರ್, ಎಸಿ 3-ಟೈರ್, ಸ್ಲೀಪರ್ ಕ್ಲಾಸ್, ಸಾಮಾನ್ಯ ದ್ವಿತೀಯ ದರ್ಜೆ ಹಾಗೂ ಲಗೇಜ್-ಕಮ್-ಬ್ರೇಕ್ ವ್ಯಾನ್ ಬೋಗಿಗಳನ್ನು ಒಳಗೊಂಡಿರುತ್ತದೆ. ಪ್ರಯಾಣಿಕರು ಈ ವಿಶೇಷ ರೈಲು ಸೇವೆಯನ್ನು ಬಳಸಿಕೊಂಡು ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ತಿಳಿಸಲಾಗಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button