*ರೈಲ್ವೆ ಪ್ರಯಾಣಿಕರಿಗೆ ಮತ್ತೊಂದು ಕೊಡುಗೆ*

ಪ್ರಗತಿವಾಹಿನಿ ಸುದ್ದಿ: ರೈಲು ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಇಲ್ಲಿದೆ. ರೈಲು ನಿಲ್ದಾಣಗಳ ಕೌಂಟರ್‌ಗಳಲ್ಲಿ ಅಂದರೆ ಆಫ್‌ಲೈನ್‌ ನಲ್ಲಿ ಖರೀದಿಸಿದ ಎಲ್ಲಾ ಟಿಕೆಟ್‌ಗಳಿಗೆ ಕಡ್ಡಾಯವಾಗಿ ವಿಮೆ ಸೌಲಭ್ಯ ಒದಗಿಸುವಂತೆ ಭಾರತೀಯ ರೈಲ್ವೆಗೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ. ರೈಲ್ವೆ ಕೌಂಟರ್‌ಗಳಲ್ಲಿ ವಿಮೆ ಸೌಲಭ್ಯ ಕಲ್ಪಿಸಿರುವುದನ್ನು ಖಚಿತಪಡಿಸಿಕೊಳ್ಳುವಂತೆ ರೈಲ್ವೆ ವಲಯಗಳಿಗೆ ನಿರ್ದೇಶನ ನೀಡಿದೆ. ಅಲ್ಲದೇ ಸೌಲಭ್ಯ ಜಾರಿಗೆ ಬರುತ್ತಿರುವ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡುವಂತೆ ಸಿಬ್ಬಂದಿಗೆ ಸೂಚಿಸಿದೆ. ಒಡಿಶಾದ ಬಾಲಾಸೋರ್‌ನಲ್ಲಿ 2023ರ ಜೂನ್‌ನಲ್ಲಿ ಸಂಭವಿಸಿದ ರೈಲು ಅಪಘಾತ ಬಳಿಕ ಸುರಕ್ಷತಾ … Continue reading *ರೈಲ್ವೆ ಪ್ರಯಾಣಿಕರಿಗೆ ಮತ್ತೊಂದು ಕೊಡುಗೆ*