ಪ್ರಗತಿವಾಹಿನಿ ಸುದ್ದಿ: ಕಿಡಿಗೇಡಿಗಳು ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್, ಗನ್ ಪೌಡರ್ ಗಳನ್ನು ಇಟ್ಟಿದ್ದು, ಭಾರಿ ಅನಾಹುತವೊಂದು ಸ್ವಲ್ಪದರಲ್ಲಿ ತಪ್ಪಿದೆ.
ಉತ್ತರ ಪ್ರದೇಶದ ಕಾನ್ಪುರದ ಬಳಿ ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್, ಗನ್ ಪೌಡರ್ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ಕಾಳಿಂದಿ ಎಕ್ಸ್ ಪ್ರೆಸ್ ರೈಲು ತೆರಳುತ್ತಿದ್ದ ವೇಳೆ ಹಳಿ ಮೇಲೆ ಈ ವಸ್ತುಗಳು ಪತ್ತೆಯಾಗಿವೆ. ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ವಿಷಯ ತಿಳಿಯುತ್ತಿದಂತೆ ಎಟಿಎಸ್ ಅಧಿಕಾರಿಗಳು, ಪೊಲೀಸರು ಸ್ಥಳಕ್ಕಾಗಮಿಸಿ ಸಿಲಿಂಡರ್, ಗನ್ ಪೌಡರ್ ವಸ್ತುಗಳನ್ನು ತೆರವುಗೊಳಿಸಿದ್ದಾರೆ. ಸುಮಾರು 20 ನಿಮಿಷಗಳ ಕಾಲ ರೈಲನ್ನು ಸ್ಥಗಿತಗೊಳಿಸಲಾಯಿತು. ರೈಲ್ವೆ ಹಳಿ ಮೇಲೆ ಇದ್ದ ಸಿಲಿಂದರ್ ಗೆ ರೈಲು ಡಿಕ್ಕಿ ಹೊಡೆದಿದೆ ಎನ್ನಲಾಗ್ಗಿದೆ. ಅದೃಷ್ಟವಶಾತ್ ಯಾವುದೆ ಅನಾಹುತ ಸಂಭವಿಸಿಲ್ಲ.
ಪ್ರಕರಣ ಸಂಬಂಧ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ