Karnataka News

*ರೈಲ್ವೆ ಟ್ರ್ಯಾಕ್ ಮೇಲೆ ಕಲ್ಲುಗಳನ್ನಿಟ್ಟ ಕಿಡಿಗೇಡಿಗಳು: ರಾಜ್ಯದಲ್ಲಿಯೂ ನಡೆಯುತ್ತಿದೆಯೇ ರೈಲು ಹಳಿ ತಪ್ಪಿಸುವ ಯತ್ನ?*

ಪ್ರಗತಿವಾಹಿನಿ ಸುದ್ದಿ: ದೇಶದ ವಿವಿಧೆಡೆಗಳಲ್ಲಿ ರೈಲು ಹಳಿ ತಪ್ಪಿಸುವ ಯತ್ನಗಳು ನಡೆಯುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚುತ್ತಿವೆ. ಇದೀಗ ಮಂಗಳೂರಿನಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ.

ಮಂಗಳೂರಿನಿಂದ ಕೇರಳಕ್ಕೆ ಹೋಗುವ ರೈಲು ಮಾರ್ಗದಲ್ಲಿ ಉಳ್ಳಾಲ ಬಳಿಯ ತೊಕ್ಕೊಟ್ಟುವಿನಲ್ಲಿ ರೈಲ್ವೆ ಹಳಿಗಳ ಮೇಲೆ ಕಿಡಿಗೇಡಿಗಳು ಜಲ್ಲಿಕಲ್ಲು ಸುರಿದಿದ್ದಾರೆ. ಈ ಮೂಲಕ ಉದ್ದೇಶಪೂರ್ವಕವಾಗಿ ರೈಲು ಹಳಿ ತಪ್ಪಿಸುವ ಯತ್ನ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ರೈಲು ಹೋಗುವಾಗ ಭಾರಿ ಸದ್ದು ಕೇಳಿ ಸ್ಥಳೀಯರು ಆತಂಕಗೊಂಡಿದ್ದಾರೆ. ಪದೇ ಪದೇ ಈ ರೀತಿ ಸದ್ದು ರೈಲು ಹಳಿಗಳ ಕಡೆಯುಂದ ಬರುತ್ತಿರುವುದನ್ನು ಗಮನಿಸಿ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ ಸ್ಥಳೀಯರು ರೈಲ್ವೆ ಹಳಿ ಮೇಲೆ ಕಲ್ಲುಗಳ ರಾಶಿ ಇರುವುದು ಕಂಡಿದ್ದಾರೆ.

Home add -Advt

ಕೂಡಲೇ ರೈಲ್ವೆ ಪೊಲೀಸರು ಹಾಗೂ ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button