Latest

*ಭೀಕರ ಅಪಘಾತ; ರೈಲಿನಡಿ ಸಿಲುಕಿ ದಂಪತಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಜಮೀನಿಗೆ ತೆರಳುತ್ತಿದ್ದ ದಂಪತಿ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರದ ಮಾಕಳಿದುರ್ಗದ ಬಳಿ ನಡೆದಿದೆ.

Home add -Advt

ಇಂದು ಮುಂಜಾನೆ ದಂಪತಿ ಜಮೀನಿಗೆ ಹೋಗುತ್ತಿದ್ದರು. ಈ ವೇಳೆ ರೈಲ್ವೆ ಹಳಿ ದಾಟುತ್ತಿದ್ದ ವೇಳೆ ಏಕಾಏಕಿ ಬಂದ ರೈಲು ಡಿಕ್ಕಿ ಹೊಡೆದಿದ್ದು, ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಂದ್ರ ನಾಯಕ (47) ಹಾಗೂ ಜಯಾಭಾಯಿ (43) ಮೃತ ದುರ್ದೈವಿಗಳು. ಮೃತ ದಂಪತಿ ದೊಡ್ಡಬಳ್ಳಾಪುರ ತಾಲೂಕಿನ ನಾಯಕನಹಳ್ಳಿಯವರು. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button