Kannada NewsKarnataka NewsNational
*ತರಬೇತಿ ವಿಮಾನ ಪತನ*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದ ಬಳಿ ತರಬೇತಿ ವಿಮಾನವೊಂದು ಪತನಗೊಂಡಿದ್ದು ವಿಮಾನ ನಿಲ್ದಾಣದ ಸುರಕ್ಷತಾ ವ್ಯವಸ್ಥೆಗಳ ಕುರಿತು ಮತ್ತೆ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ.
ಅದೃಷ್ಟವಶಾತ್ ಘಟನೆಯಲ್ಲಿ ತರಬೇತುದಾರ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದು ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ.
ವಿಮಾನ ಪತನಗೊಳ್ಳುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಪ್ರದೇಶವನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ದುರಂತದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.




