Kannada News

ಬೆಳಗಾವಿ ಜಿಲ್ಲೆಯ ಪ್ರಮುಖ ಸುದ್ದಿಗಳು

ತಂಬಾಕಿನಿಂದಾಗುವ ದುಷ್ಪರಿಣಾಮದ ಕುರಿತು ತರಬೇತಿ ಕಾರ್ಯಾಗಾರ

ಪ್ರಗತಿವಾಹಿನಿ ಸುದ್ದಿ – ಬೆಳಗಾವಿ : ತಂಬಾಕು ಹಾಗೂ ತಂಬಾಕು ಉತ್ಪನ್ನಗಳ ಸೇವನೆಯಿಂದಾಗಿ ಶರೀರದ ಮೇಲೆ ಅನೇಕ ದುಷ್ಪರಿಣಾಮಗಳು ಉಂಟಾಗುತ್ತವೆ ಎಂದು ಕಾರ್ಖಾನೆ ಸಹಾಯಕ ನಿರ್ದೇಶಕರು ಕಾರ್ಖಾನೆಗಳು ಬಾಯ್ಲರಗಳು, ಕೈಗಾರಿಕಾ ಸುರಕ್ಷತೆ ಹಾಗೂ ಸ್ವಸ್ಥ ಇಲಾಖೆ ಭಾರತಿ ಮಗದುಮ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ವಾರ್ತಾ ಇಲಾಖೆ, ಪೋಲಿಸ ಇಲಾಖೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಬ್ಲೂಂಬರ್ಗ ಇನಿಷಿಯೆಟಿವ್ ಯೋಜನೆ ಅಡಿಯಲ್ಲಿ ಎನ್.ಎಸ್.ಎಸ ಸಂಯೋಜಕರಿಗೆ, ತಂಬಾಕು ಹಾಗೂ ತಂಬಾಕಿನಿಂದಾಗುವ ದುಷ್ಪರಿಣಾಮ ಕುರಿತು ಜುಲೈ 20 ರಂದು ಚಿಕ್ಕೋಡಿಯ ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ತಂಬಾಕು ಹಾಗೂ ತಂಬಾಕಿನ ಉತ್ಪನ್ನಗಳಿಂದ ಮನುಷ್ಯನ ಆರೋಗ್ಯದ ಮೇಲೆ ಹಲುವಾರು ರೀತಿಯ ದುಷ್ಪರಿಣಾಮ ಬಿರುತ್ತವೆ ಹಾಗೂ ತಂಬಾಕಿನಲ್ಲಿ ವಿವಿಧ ರೀತಿಯ ರಾಸಾಯನಿಕ ಆಂಶಗಳಿರುತ್ತವೆ. ಹೀಗಾಗಿ ಸಾರ್ವನಿಕರು ತಂಬಾಕು ಸೇವನೆ ತ್ಯಜಿಸಬೇಕು ತಿಳಿಸಿದರು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ರಾಜ್ಯ ತಂಬಾಕು ನಿಯಂತ್ರಣ ಘಟಕ ಬೆಳಗಾವಿ ವಿಭಾಗೀಯ ಸಂಯೋಜಕರು ಮಹಾಂತೇಶ ಉಳ್ಳಾಗಡ್ಡಿ ಇವರು ತಂಬಾಕಿನ ಕಾನೂನು ಅರಿವು ಕೋಟ್ಪಾ-2003 ರ ಬಗ್ಗೆ ಸೆಕ್ಷನ್-4 ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಮಾಡಲಾಗಿದೆ ಎಂದರು.

ಈ ಕಾನೂನು ಉಲ್ಲಂಘಿಸಿದ ವ್ಯಕ್ಕಿಗೆ 200 ದಂಡ ವಿಧಿಸಲಾಗುವುದು. ಸೆಕ್ಷನ್-5 ಪ್ರಕಾರ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು ನಿಷೇದ. ಸೆಕ್ಷನ್-6ರ ಪ್ರಕಾರ ತಂಬಾಕು ಉತ್ಪನ್ನಗಳ ಅಪ್ರಾಪ್ತ ವಯಸ್ಕರಿಗೆ ನಿಯಂತ್ರಣ ಮಾಡುವುದು ಹಾಗೂ ಸೆಕ್ಷನ್ -6(ಬಿ) ಪ್ರಕಾರ ಶಿಕ್ಷಣ ಸಂಸ್ಥೆಗಳ 100 ಮೀಟರ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ.

ಸೆಕ್ಷನ್-7 ಪ್ರಕಾರ ಸಿಗರೇಟ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲೆ ನಿರ್ದಿಷ್ಟ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ತಿಳಿಸಿ ಕೋಟ್ಪಾ ಕಾಯ್ದೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯಾಧಿಕಾರಿಗಳು ಡಾ. ವ್ಹಿ.ವ್ಹಿ ಶಿಂದೆ, ಜಿಲ್ಲಾ ಸಮೀಕ್ಷಣಾಧಿಕಾರಿಗಳು ಹಾಗೂ ತಂಬಾಕು ನಿಯಂತ್ರಣಾಧಿಕಾರಿಗಳಾದ ಡಾ. ಬಿ.ಎನ್ ತುಕ್ಕಾರ, ದಂತ ವೈದ್ಯರಾದ ಡಾ. ದೀಪಾ ಮಗದುಮ, ಎನ್ಎಸ್ಎಸ್ ಕೋ-ಆರ್ಡಿನೆರ‍್ಸ್, ರೆಡ್‌ಕ್ರಾಸ್ ಪದಾಧಿಕಾರಿಗಳು, ರೊಟರಿಕ್ಲಬ್ ಪದಾಧಿಕಾರಿಗಳು ಮತ್ತು ಎಲ್ಲ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಮಾಜ ಕಾರ್ಯಕರ್ತೆಯಾದ ಕವಿತಾ ರಾಜನ್ನವರ ನಿರೂಪಿಸಿದರು. ಜಿಲ್ಲಾ ಸಲಹೆಗಾರರು ಡಾ. ಶ್ವೇತ ಪಾಟೀಲ ವಂದಿಸಿರು.

ಜುಲೈ 23 ರಂದು ಸಾರಿಗೆ ಪ್ರಾಧಿಕಾರದ ಕುಂದು ಕೊರತೆಗಳ ಸಭೆ

ಬೆಳಗಾವಿ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಇವರುಗಳ ಅಧ್ಯಕ್ಷತೆಯಲ್ಲಿ ಜುಲೈ 23 ರಂದು ಸಾಯಂಕಾಲ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಸಮಸ್ಯೆಗಳು, ಕುಂದು ಕೊರತೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಸಭೆ ನಡೆಸಲಾಗುದು ಎಂದು ಬೆಳಗಾವಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿಎಮ್-ಫಸಲ್ ಬಿಮಾ ಯೋಜನೆ: 990.35 ಲಕ್ಷ ವಿಮೆ ಪರಿಹಾರ ಮಂಜೂರು

2018 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಸುಮಾರು 47224 ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಪಾಲ್ಗೊಂಡಿರುತ್ತಾರೆ.

ಬೆಳೆ ಕಟಾವು ಪ್ರಯೋಗಗಳ ಆಧಾರದ ಮೇಲೆ ವಿಮೆ ಪರಿಹಾರ ಮೊತ್ತದ ಲೆಕ್ಕಾಚಾರ ಮಾಡಿದ ನಂತರ, ಸದರಿ ಹಂಗಾಮಿಗೆ ಸುಮಾರು 9761 ರೈತರಿಗೆ ಒಟ್ಟು ರೂ. 990.35 ಲಕ್ಷ ವಿಮೆ ಪರಿಹಾರ ಮಂಜೂರಾಗಿದೆ. ಅದರ ಪೈಕಿ ಈಗಾಗಲೇ 6739 ರೈತರಿಗೆ ರೂ. 757.57 ಲಕ್ಷ ವಿಮೆ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಆಗಿರುತ್ತದೆ.

ಇನ್ನೂಳಿದ ರೈತರಿಗೆ ವಿಮೆ ಕಂಪನಿ ವತಿಯಿಂದ ವಿಮೆ ಪರಿಹಾರ ಜಮೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ನೇಮಕಾತಿ ಪರೀಕ್ಷೆಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಆಯೋಜಿಸಿದೆ.

ದೇಶದ ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳವರು ಮುಂದೆ ಒಂದು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳ ಹಾಗೂ ಗುಮಾಸ್ತರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತರು ಜುಲೈ 31 ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಮೈಸೂರಿನ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಕಛೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944ನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ. ಬಿ. ರಮೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 24 ರಂದು ಗ್ರಾಹಕರ ಸಭೆ

ಗ್ರಾಮೀಣ ಉಪ ವಿಭಾಗ-2ರ ಆರ್-2 ಶಾಖೆ ವ್ಯಾಪ್ತಿಗೆ ಬರುವ ಗ್ರಾಮಗಳ ಗ್ರಾಹಕರ ಸಭೆಯನ್ನು ಜುಲೈ 24 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರಗೆ ಹುದಲಿ ಗ್ರಾಮ ಪಂಚಾಯತ ಸಭಾಂಗಣದಲ್ಲ್ಲಿ ಆಯೋಜಿಸಲಾಗಿದೆ.

ಸದರಿ ಸಭೆಗೆ ಮುಚ್ಚಂಡಿ, ಅಷ್ಟೆ, ಕಲಕಾಂಬ, ಖನಗಾಂವ ಬಿಕೆ, ಹುದಲಿ, ಧರನಟ್ಟಿ, ತುಮ್ಮರಗುದ್ದಿ, ಪನಗುತ್ತಿ, ಹಾರನಕೊಳ್ಳ ನಿಲಜಿ, ಮಾಸ್ತಮರಡಿ, ಶಿಂಧೊಳ್ಳಿ, ಹಾಗೂ ಹಲಗಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಗೆ ಬರುವ ಗ್ರಾಮದ ಗ್ರಾಹಕರು ಈ ಸಭೆಗೆ ಹಾಜರಾಗಿ ಪ್ರಯೋಜನೆ ಪಡೆದುಕೊಳ್ಳಬೇಕು ಎಂದು ಬೆಳಗಾವಿ ಹುವಿಸಕಂನಿ, ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗ-2, ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ./////

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button