ಪ್ರಗತಿವಾಹಿನಿ ಸುದ್ದಿ; ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರಂ ರೈಲು ನಿಲ್ದಾಣದಲ್ಲಿ ನಡೆದಿದೆ.
ಶ್ರೀನಿವಾಸಾಚಾರಿ (48) ಮೃತ ದುರ್ದೈವಿ. ಕಾಮಸಮುದ್ರಂ ನಿವಾಸಿಯಾಗಿರುವ ಶ್ರೀನಿವಾಸಾಚಾರಿ ಬೆಂಗಳೂರಿಗೆ ತೆರಳಲೆಂದು ರೈಲ್ವೆ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ಶ್ರೀನಿವಾಸಾಚಾರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಕೂಡ ವ್ಯಕ್ತವಾಗಿದೆ. ಬಂಗಾರಪೇಟೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ