Vikalachetanara Day
Cancer Hospital 2
Bottom Add. 3

*ರೈಲುಗಳಲ್ಲಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಪೊಲೀಸ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳ್ಳರನ್ನು ಹಿಡಿಯಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ಕಳ್ಳತನಕ್ಕಿಳಿದ ಘಟನೆಯಿದು. ಹಗಲಲ್ಲಿ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆಸಾಮಿ ರಾತ್ರಿ ವೇಳೆ ರೈಲುಗಳಲ್ಲಿ ಕಳ್ಳತನ ಮಾಡುತ್ತಿದ್ದಾತನನ್ನು ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ ರೈಲ್ವೆ ಹೊರ ಠಾಣೆ ಹೆಡ್ ಕಾನ್ಸ್ ಟೇಬಲ್ ಸಿದ್ದರಾಮರೆಡ್ಡಿ ಬಂಧಿತ ಆರೋಪಿ. ರೈಲುಗಳಲ್ಲಿ ಕಳ್ಳತನ ಮಾಡಲೆಂದೇ ಸಾಬಣ್ಣ ಎಂಬ ಎಂ.ಓ.ಬಿ. ಅಪರಾಧಿಯೊಬ್ಬನನ್ನು ಜೊತೆಯಾಗಿ ಇಟ್ಟುಕೊಂಡಿದ್ದ.

ರೈಲಿನಲ್ಲಿ ಕೇರಳ ಹಾಗೂ ತಮಿಳುನಾಡಿನ ಪ್ರಯಾಣಿಕರೇ ಇವರ ಟಾರ್ಗೆಟ್ ಆಗಿತ್ತು. ನಗದು ಹಣ, ಚಿನ್ನಾಭರಣಗಳನ್ನು ಮಾತ್ರ ಕದ್ದು ಎಸ್ಕೇಪ್ ಆಗುತ್ತಿದ್ದರು. ಸದ್ಯ ಆರೋಪಿ ಸಿದ್ದರಾಮರೆಡ್ಡಿಯನ್ನು ಪೊಲಿಸರು ಬಂಧಿಸಿದ್ದು, ಸೇವೆಯಿಂದ ಅಮಾನತು ಮಾಡಲಾಗಲಿದೆ.


Bottom Add3
Bottom Ad 2

You cannot copy content of this page