Kannada NewsLatest

BREAKING NEWS: ಟ್ರಾನ್ಸ್ ಫಾರ್ಮರ್ ಸ್ಫೋಟ; 15 ಜನರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡ ಪರಿನಾಮ ವಿದ್ಯುತ್ ಪ್ರವಹಿಸಿ 15 ಜನರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಚಮೋಲಿಯಲ್ಲಿ ನಡೆದಿದೆ.

ಅಲಕಾನಂದ ನದಿ ಬಳಿ ಈ ದುರಂತ ಸಂಭವಿಸಿದ್ದು, ನಮಾಮಿ ಗಂಗೆ ಯೋಜನೆ ಕಾಮಗಾರಿ ವೇಳೆ ಈ ಅವಘಡ ಘಟಿಸಿದೆ ಎಂದು ಹೇಳಲಾಗುತ್ತಿದೆ.

ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡ ಪರಿಣಾಮ ವಿದ್ಯುತ್ ಪ್ರವಹಿಸಿದ್ದು, 15 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಚಮೋಲಿ ಎಸ್ ಪಿ ಪರಮೇಂದ್ರ ದೋವಲ್ ತಿಳಿಸಿದ್ದಾರೆ.

Home add -Advt


Related Articles

Back to top button