
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – 2019 -20ನೇ ಸಾಲಿನ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಮಹಿಳಾ ಗುಂಪಿನ ಸ್ವ ಉದ್ಯೋಗಕ್ಕಾಗಿ 2.50 ಲಕ್ಷ ರೂ.ಗಳ ಚೆಕ್ ನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕಿಣಿಯೆ ಗ್ರಾಮದಲ್ಲಿ ರಮಾಬಾಯಿ ಮಹಿಳಾ ಸ್ವ ಸಹಾಯ ಸಂಘಕ್ಕೆ ಹಸ್ತಾಂತರಿಸಿದರು.
ಮಹಿಳೆಯರು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಸಲುವಾಗಿ ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಇಂತಹ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೆಬ್ಬಾಳಕರ್ ಕರೆ ನೀಡಿದರು.
ಚೆಕ್ ಹಸ್ತಾಂತರಿಸುವ ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಉಚಗಾಂವ ಬ್ಲಾಕ್ ಎಸ್ಸಿ ಘಟಕದ ಅಧ್ಯಕ್ಷ ಮಹೇಶ ಕೋಲಕಾರ, ಮಹಿಳಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ