ಪ್ರಗತಿವಾಹಿನಿ ಸುದ್ದಿ, ಬೆಳಗಾವಿ– ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಮೈಸೂರು ನಗರಾಭಿವೃದ್ಧಿ ಕೋಶದ ನಿರ್ದೇಶಕರಾಗಿದ್ದ ಶುಭಾ ಅವರನ್ನು ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಪಾಲಿಕೆ ಆಯುಕ್ತರಾಗಿ ಅಶೋಕ ದುಡಗುಂಟಿ ಅವರಿಗೆ ಯಾವುದೇ ಸ್ಥಳ ನಿಯುಕ್ತಿ ಮಾಡಲಾಗಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ