Kannada NewsKarnataka NewsLatest

*ಐವರು ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರವು ಐವರು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕೆಲ ಅಧಿಕಾರಿಗಳಿಗೆ ಹೊಸ ಹುದ್ದೆಗಳ ಜೊತೆಗೆ ಹೆಚ್ಚುವರಿ ಜವಾಬ್ದಾರಿಯನ್ನೂ ನೀಡಲಾಗಿದೆ.

ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿದ್ದ ಅಮಲಾನ್ ಆದಿತ್ಯ ಬಿಸ್ವಾಸ್ ಅವರನ್ನು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಹುದ್ದೆಯ ನಿರೀಕ್ಷೆಯಲ್ಲಿದ್ದ ಕ್ಯಾಪ್ಟನ್ ಡಾ. ರಾಜೇಂದ್ರ ಕೆ. ಅವರನ್ನು ಬೆಂಗಳೂರು ವಿಭಾಗದ ನೂತನ ಪ್ರಾದೇಶಿಕ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಪಂಕಜ್ ಕುಮಾರ್ ಪಾಂಡೆ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದ್ದು, ಇ-ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯೂ ಮುಂದುವರಿಯಲಿದೆ.

ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿದ್ದ ಸಲ್ಮಾ ಕೆ. ಫಾಹೀಮ್ ಅವರನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಇದೇ ವೇಳೆ ಕಾರ್ಮಿಕ ಇಲಾಖೆಯ ಆಯುಕ್ತರಾಗಿದ್ದ ಡಾ. ರಾಗಪ್ರಿಯಾ ಆರ್. ಅವರನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ (KSSIDC) ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಈ ಜವಾಬ್ದಾರಿಯನ್ನು ಅವರು ಹೆಚ್ಚುವರಿ ಹೊಣೆಗಾರಿಕೆಯಾಗಿ ನಿರ್ವಹಿಸಲಿದ್ದಾರೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಅವರು ಈ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button