Latest

ಬಹು ನಿರೀಕ್ಷಿತ ಹಿಜಾಬ್ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬಹಳ ಕುತೂಹಲದಿಂದ ಕಾಯುತ್ತಿದ್ದ ಹಿಜಾಬ್ ಪ್ರಕರಣವನ್ನು ನ್ಯಾಯಮೂರ್ತಿ ಕೃಷ್ಣಾ ದೀಕ್ಷಿತ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಿದ್ದಾರೆ.

ಪ್ರಕರಣ ಕುರಿತು 2 ದಿನ ಸುದೀರ್ಘ ವಾದ ವಿವಾದ ನಡೆದ ನಂತರ ಪ್ರಕರಣವನ್ನು ನ್ಯಾಯಾಧೀಶರು, ಪ್ರಕರಣದ ಕುರಿತು ವಿಸ್ತೃತ ಚರ್ಚೆಯಾಗಬೇಕಾದ ಅಗತ್ಯವಿದೆ. ಹಾಗಾಗಿ ಮುಖ್ಯ ನ್ಯಾಯಮೂರ್ತಿಗಳ ನಿರ್ಧಾರಕ್ಕೆ ವರ್ಗಾಯಿಸುತ್ತೇನೆ ಎಂದು ತಿಳಿಸಿದರು.

Home add -Advt

2 ತಿಂಗಳ ಅವಧಿಗೆ ಹಿಜಾಬ್ ಧರಿಸಲು ಅವಕಾಶ ನೀಡಿ ಮಧ್ಯಂತರ ತೀರ್ಪು ನೀಡುವಂತೆ ಅರ್ಜಿದಾರರ ಪರ ವಕೀಲರ ಕೋರಿಕೆಯನ್ನು ನ್ಯಾಯಾಧೀಶರು ಮನ್ನಿಸಲಿಲ್ಲ. ಮಧ್ಯಂತರ ತೀರ್ಪು ನೀಡಬಾರದು. ಸರಕಾರದ ವಸ್ತ್ರಸಂಹಿತೆ ಕಟ್ಟುನಿಟ್ಟಾಗಿ ಜಾರಿಯಾಗಬೇಕು ಎಂದು ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದಿಸಿದರು.

ಪ್ರಕರಣದಲ್ಲಿ ಧರ್ಮದ ವಿಚಾರ ಮತ್ತು ಸಾಂವಿಧಾನಿಕ ವಿಚಾರವಿರುವುದರಿಂದ, ಇದೊಂದು ಸೂಕ್ಷ್ಮ ವಿಚಾರವಾಗಿರುವುದರಿಂದ ವಿಸ್ತೃತ ವಿಚಾರಣೆ ಅಗತ್ಯವಿದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು. ಹಾಗಾಗಿ ಮುಖ್ಯ ನ್ಯಾಯಾಧೀಶರ ನಿರ್ಣಯಕ್ಕೆ ಬಡಲು, ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಮುಖ್ಯ ನ್ಯಾಯಧೀಶರಿಗೆ ವರ್ಗಾಯಿಸಲು ತೀರ್ಪು ನೀಡಿದರು.

ಇದರಿಂದಾಗಿ ಪ್ರಕರಣದ ತೀರ್ಪು ತಕ್ಷಣಕ್ಕೆ ಬರುತ್ತದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ.

ಮುಖ್ಯ ನ್ಯಾಯಾಧೀಶರು ಯಾವ ನಿರ್ಣಯ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿದೆ.

ಈ ಸಂಬಂಧ ವಿಚಾರಣೆಗೆ ಪ್ರತ್ಯೇಕ ಪೀಠ ಸ್ಥಾಪನೆ ಮಾಡುವ ಸಾಧ್ಯತೆ ಇದೆ.

ಹಿಜಾಬ್ ವಿವಾದ; ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

Related Articles

Back to top button