
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಬೆಳಗಾವಿ ಜಿಲ್ಲಾ ಪಂಚಾಯಿತಿಗೆ ದರ್ಶನ್ ಎಚ್.ವಿ. ಸಿಇಒ ಆಗಿ ಬರಲಿದ್ದಾರೆ. 2016 ಬ್ಯಾಚ್ ಅಧಿಕಾರಿ ದರ್ಶನ್ ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ