Karnataka News

*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಮುಂಗಾರು ಎಂಟ್ರಿಯಾಗುತ್ತಿದ್ದಂತೆ ಅಬ್ಬರಿಸಿದ್ದ ಮಳೆರಾಯ ಬಳಿಕ ಸುಳಿವಿಲ್ಲದಂತಾಗಿದ್ದಾನೆ. ಆದರೆ ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ.

Home add -Advt

ರಾಜ್ಯದಲ್ಲಿ ಜೂನ್ 12ರಿಂದ ಭಾರಿ ಮಳೆಯಾಗಲಿದೆ. ಅದರಲ್ಲಿಯೂ ಕೆಲ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಗಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ವಿಬೆಳಗಾವಿ, ಜಯಪುರ, ಧಾರವಾಡ, ಚಿಕ್ಕಬಳ್ಳಾಪುರ, ದಾವಣಗೆರೆ, ವಿಜಯನಗರ, ಕೊಡಗು, ಬೀದರ್ ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಇಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


Related Articles

Back to top button