National

*ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಭಾರಿ ಹಿನ್ನಡೆ: ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಆರೋಪಿಗಳ ಮನೆಗಳನ್ನು ನೆಲಸಮ ಮಾಡುವ ಬುಲ್ಡೋಜರ್ ಕಾರ್ಯಾಚರಣೆ ಸ್ವೀಕಾರಾರ್ಹವಲ್ಲ. ಆರೋಪಿಗಳಾಗಲಿ, ತಪ್ಪಿತಸ್ಥರಾಗಿರಲಿ ಯಾರದೇ ಮನೆಯನ್ನು ನೆಲಸಮ ಮಡುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವ ಸರ್ಕಾರದ ಉತ್ತರ ಪ್ರದೇಶದಲ್ಲಿ ಆರೋಪಿಗಳ ಹಾಗೂ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿರುವವವರ ಮನೆಗಳನ್ನು ಬುಲ್ಡೋಜರ್ ಕಾರ್ಯಾಚರಣೆ ಮೂಲಕ ನೆಲಸಮ ಮಾಡಲಗುತ್ತಿತ್ತು. ಈ ಕ್ರಮವನ್ನು ಉತ್ತರ ಪ್ರದೇಶದ ಬಳಿಕ ಬಿಜೆಪಿ ಆಡಳಿತದ ಇನ್ನೂ ಕೆಲ ರಾಜ್ಯಗಳಲ್ಲಿ ಜಾರಿಗೆ ಬಂದಿತ್ತು. ಇದು ತೀವ್ರ ಆಕ್ಷೇಪಕ್ಕೆ ಕಾರಣವಾಗಿತ್ತು ಹಲವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ಬಳಿಕ ಇದೀಗ ಸುಪ್ರೀಂ ಕೋರ್ಟ್, ಆರೋಪಿಗಳಾಗಲಿ, ತಪ್ಪಿತಸ್ಥರಾಗಲಿ ಮನೆಗಳನ್ನು ನೆಲಸಮ ಮಾಡುವಂತಿಲ್ಲ ಎಂದು ತೀರ್ಪು ನೀಡಿದೆ.


Related Articles

Back to top button