Karnataka News

ಸಾರಿಗೆ ನೌಕರರಿಗೆ ಸಿಹಿ ಸುದ್ದಿ

ಪ್ರಗತಿ ವಾಹಿನಿ ಸುದ್ದಿ, ಬೆಂಗಳೂರು: ಹೊಸ ವರ್ಷದ ಹೊಸ್ತಿಲಲ್ಲಿ ಸಾರಿಗೆ ನೌಕರರಿಗೆ ಸಾರಿಗೆ ಸಚಿವ ಶ್ರೀರಾಮುಲು ಸಿಹಿ ಸುದ್ದಿ ನೀಡಿದ್ದಾರೆ.

ಕಳೆದ ವರ್ಷ ಪ್ರತಿಭಟನೆ ನಡೆಸಿದ್ದ ಕಾರಣಕ್ಕೆ ವಜಾಗೊಳಿಸಿದ್ದ ಸಾರಿಗೆ ಸಂಸ್ಥೆಯ ವಿವಿಧ ವಿಭಾಗಗಳ ನೌಕರರನ್ನು ಪುನಃ ನೇಮಕ ಮಾಡಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ.

ಶನಿವಾರ ಬೆಂಗಳೂರಿನ ಶಾಂತಿ ನಗರದಲ್ಲಿರುವ ಕೆಎಸ್‍ಆರ್‍ಟಿಸಿ ಕೇಂದ್ರ ಕಚೇರಿಯಲ್ಲಿ ಶ್ರೀ ರಾಮುಲು ಅವರು ಕೆಎಸ್‍ಆರ್‍ಟಿಸಿಯ ಎಲ್ಲ ಸಂಘಟನೆಗಳ ಪದಾಧಿಕಾರಿಗಳ ಜತೆ ಸಭೆ ನಡೆಸಿದರು.

 

Home add -Advt

2021ರ ಏಪ್ರಿಲ್‍ನಲ್ಲಿ 14 ದಿನಗಳ ಕಾಲ ಮುಷ್ಕರ ಹೂಡಿದ್ದ ಕಾರಣ ವಜಾಗೊಂಡಿದ್ದ ಬಿಎಂಟಿಸಿ ಸೇರಿದಂತೆ ಎಲ್ಲ ನಿಗಮಗಳ ನೌಕರರನ್ನು ಯಾವುದೇ ಷರತ್ತು ವಿಧಿಸದೆ ಇನ್ನು ಒಂದು ವಾರದಲ್ಲಿ ಪುನಃ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಭೆಯಲ್ಲಿ ಅವರು ಭರವಸೆ ನೀಡಿದ್ದಾರೆ.

ರಸ್ತೆ ಸಾರಿಗೆ ಸಿಬ್ಬಂದಿಗೆ ಸಿಹಿ ಸುದ್ದಿ ನೀಡಿದ ಸಚಿವ ಶ್ರೀರಾಮುಲು

https://pragati.taskdun.com/ksrtc-staff-salary-revision-transport-minister-shriramulu-assured/

ಮಾಣಿಕ್ ಭಾಗ್ ಸಂಸ್ಥೆಯ ನಿರ್ದೇಶಕ ಅಶೋಕ ಮಿರ್ಜಿ ನಿಧನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button