
ಪ್ರಗತಿವಾಹಿನಿ ಸುದ್ದಿ : ಸಾರಿಗೆ ಇಲಾಖೆಯಲ್ಲಿ ಬರೋಬ್ಬರಿ 9 ಸಾವಿರ ವಿವಿಧ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ.
ಶಕ್ತಿ ಯೋಜನೆ ಜಾರಿಯ ನಂತರದಿಂದ ಸರ್ಕಾರಿ ಬಸ್ಗಳು ಪ್ರಯಾಣಿಕರಿಂದ ತುಂಬಿಹೋಗಿವೆ. ಮಹಿಳೆಯರು ಉದ್ಯೋಗ, ಶಿಕ್ಷಣ ಹಾಗೂ ಪ್ರವಾಸ ಮುಂತಾದ ಕಾರಣಗಳಿಗಾಗಿ ಉಚಿತ ಪ್ರಯಾಣದ ಸೌಲಭ್ಯ ಪಡೆದು ಸಂಚಾರ ನಡೆಸುತ್ತಿದ್ದು ನಿಜಾರ್ಥದಲ್ಲಿ ಶಕ್ತಿ ನಾಡಿನ ಸಾರಿಗೆ ವ್ಯವಸ್ಥೆಗೆ ಶಕ್ತಿ ತುಂಬಿದೆ.
ಶಕ್ತಿ ಯೋಜನೆ ಜಾರಿಯ ನಂತರದಿಂದ ಸರ್ಕಾರಿ ಬಸ್ಗಳು ಪ್ರಯಾಣಿಕರಿಂದ ತುಂಬಿಹೋಗಿವೆ. ಮಹಿಳೆಯರು ಉದ್ಯೋಗ, ಶಿಕ್ಷಣ ಹಾಗೂ ಪ್ರವಾಸ ಮುಂತಾದ ಕಾರಣಗಳಿಗಾಗಿ ಉಚಿತ ಪ್ರಯಾಣದ ಸೌಲಭ್ಯ ಪಡೆದು ಸಂಚಾರ ನಡೆಸುತ್ತಿದ್ದು, ನಿಜಾರ್ಥದಲ್ಲಿ ಶಕ್ತಿ ನಾಡಿನ ಸಾರಿಗೆ ವ್ಯವಸ್ಥೆಗೆ ಶಕ್ತಿ ತುಂಬಿದೆ.
ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿರುವ ಹಿನ್ನೆಲೆ ಹೆಚ್ಚುವರಿ ಬಸ್ಗಳನ್ನು ಖರೀದಿಸಲಾಗಿದೆ. ಈ ಮೂಲಕ ಉದ್ಯೋಗ ಸೃಷ್ಟಿಯು ಹೆಚ್ಚಾಗಿದೆ. ಈಗಾಗಲೇ ಸಾರಿಗೆ ಸಂಸ್ಥೆಗಳಲ್ಲಿನ 9,000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡುವುದರ ಜೊತೆಗೆ 2,000 ಚಾಲಕ ಕಂ ನಿರ್ವಾಹಕರು ಹಾಗೂ 300 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ