Kannada NewsKarnataka NewsLatest

*ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು*

ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರ ಆಗಸ್ಟ್ ನಲ್ಲಿ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರನ್ನು ಮನವೊಲಿಸಿ ಬೇಡಿಕೆ ಈಡೇರಿಸುವ ಭರವಸೆ ಕೊಟ್ಟಿತ್ತು. ಆದರೆ ಈವರೆಗೆ ಸರ್ಕಾರ ಭರವಸೆ ಈಡೇರಿಸಿಲ್ಲ. ಇದರಿಂದ ಸಿಡಿದೆದ್ದಿರುವ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ನಿರ್ಧರಿಸಿದ್ದಾರೆ.

ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ, ಎನ್ ಡಬ್ಲ್ಯೂ ಕೆ.ಎಸ್.ಆರ್.ಟಿ.ಸಿ. ಕೆ.ಕೆ.ಆರ್.ಟಿ.ಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಅಕ್ಟೋಬರ್ 15ರಿಂದ ಮುಷ್ಕರ ಆರಂಭಿಸಲಿದ್ದಾರೆ.

Home add -Advt

ಮೊದಲ ಹಂತದಲ್ಲಿ ಅಕ್ಟೋಬರ್ 15ರಿಂದ 19ರವರೆಗೆ ಉಪವಾಸ ಸತ್ಯಾಗ್ರಹ ನಡೆಸಲು ಮುಂದಾಗಿದ್ದಾರೆ. 38 ತಿಂಗಳ ಬಾಕಿ ಬಿಡುಗಡೆ, ವೇತನ ಪರೀಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಈ ದೇರ‍ಿಸುವಂತೆ ಆಘ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಮುಷ್ಕರ ಬಹುತೇಕ ಫಿಕ್ಸ್ ಆಗಿದ್ದು, ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

Related Articles

Back to top button