ಪ್ರಗತಿವಾಹಿನಿ ಸುದ್ದಿ: ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಸಾರಿಗೆ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನೌಕರರು ಮುಷ್ಕರ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸಂಬಳ ಹೆಚ್ಚಳ ಸೇರಿದಂತೆ ಅರಿಯರ್ಸ್, ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚ್ಯುಟಿ ಹಣ ರಾಜ್ಯ ಸರ್ಕಾರ ಬಿಡುಗಡೆ ಆಗ್ರಹಿಸುತ್ತಿದೆ. ಸಾಮಾನ್ಯವಾಗಿ ಈ ವರ್ಷದ ಆರಂಭದಲ್ಲಿ ಸಾರಿಗೆ ನೌಕರರ ಸಂಬಳವನ್ನು ಹೆಚ್ಚಿಸಬೇಕಿತ್ತು. ಆದರೆ ನವೆಂಬರ್ ತಿಂಗಳು ಮುಗಿಯುತ್ತಾ ಬಂದರು ಕೂಡ ಈ ಸಂಬಳ ಹೆಚ್ಚಿಸುವ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಸಿಟ್ಟಾದ ಸಾರಿಗೆ ನೌಕರರು ಮುಷ್ಕರ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಸಂಬಳ ಹೆಚ್ಚಳ ಸೇರಿದಂತೆ, ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿಲ್ಲ. ಅರಿಯರ್ಸ್ ಹಣವೇ ಒಟ್ಟು 1750 ಕೋಟಿ ರೂಪಾಯಿ ನೀಡಬೇಕಿದೆ. ಗ್ರಾಚ್ಯುಟಿ ಹಣ ಸುಮಾರು 399.29 ಕೋಟಿ ರೂಪಾಯಿ ನೀಡಬೇಕಿದೆ ಎಂದು ವರದಿಯಾಗಿದೆ.
ಇನ್ನು ಈ ಬಗ್ಗೆ ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ಪ್ರತಿಕ್ರಿಯಿಸಿದ್ದು ಮುಷ್ಕರವನ್ನು ಹಿಂಪಡೆಯುವ ಮಾತೇ ಇಲ್ಲ, ನಮ್ಮ ಬೇಡಿಕೆ ಈಡೇರುವವರೆಗೆ ಮುಷ್ಕರ ನಿಲ್ಲಿಸುವ ಮಾತೇ ಇಲ್ಲ. ಈ ಬಗ್ಗೆ ಸರ್ಕಾರ ಕೂಡ ಯಾವುದೇ ಆಸಕ್ತಿ ತೋರುತ್ತಿಲ್ಲ ಸದ್ಯದಲ್ಲೇ ದಿನಾಂಕ ಘೋಷಿಸುವುದಾಗಿ ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ