Latest

ಸಾರಿಗೆ ನೌಕರರನ್ನು ವಶಕ್ಕೆ ಪಡೆದ ಪೊಲೀಸರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ರಾಜಧಾನಿ ಬೆಂಗಳೂರಿನಲ್ಲಿ ತಮ್ಮ ಕುಟುಂಬ ಸಮೇತರಾಗಿ ಪ್ರತಿಭಟನೆ ನಡೆಸಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ರೈತರ ಪ್ರತಿಭಟನೆ ಭುಗಿಲೆದ್ದಿದ್ದರೆ, ಇನ್ನೊಂದೆಡೆ ಸಾರಿಗೆ ನೌಕರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಾರಿಗೆ ನೌಕರರು ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಬಳಿಕ ಸಿಟಿ ರೈಲು ನಿಲ್ದಾಣದಿಂದ ವಿಧಾನಸೌಧದವರೆಗೆ ಕಾಲ್ನಡಿಗೆ ಜಾಥಾ ನಡೆಸುವ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

Home add -Advt

ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಸಾರಿಗೆ ನೌಕರರನ್ನು ಪೊಲೀಸರು ಫ್ರೀಡಂ ಪಾರ್ಕ್ ಬಳಿ ತಡೆದಿದ್ದು, ನೂರಾರು ನೌಕರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related Articles

Back to top button