ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾರಿಗೆ ಸಿಬ್ಬಂದಿಗಳು ಮತ್ತೆ ಮುಷ್ಕರ ಮಾಡುವ ಬಗ್ಗೆ ಸುಳಿವು ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ಆದೇಶ ಹೊರಡಿಸಿದೆ.
ಜುಲೈ 5ರ ಬಳಿಕ ಸಾರಿಗೆ ನೌಕರರು ಮುಷ್ಕರ ನಡೆಸುವ ಬಗ್ಗೆ ಸುಳಿವು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಜುಲೈ 1ರಿಂದ ಡಿಸೆಂಬರ್ 31ರವರೆಗೆ ಅಗತ್ಯ ಸೇವೆ ಮುಷ್ಕರ ನಿಷೇಧಿಸಲಾಗಿದ್ದು, ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ 3 ಉಪವಿಭಾಗ 1ರ ಅನ್ವಯ ಅಗತ್ಯ ಸೇವೆಗಳ ಮುಷ್ಕರ ಮಾಡುವಂತಿಲ್ಲ ಎಂದು ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ಇದೀಗ ಸಾರಿಗೆ ಸಿಬ್ಬಂದಿಗಳ ಮುಷ್ಕರವನ್ನು ನಿಷೇಧಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ