Latest

ಪ್ರತಿಭಟನೆ ನಡೆಸಿದರೆ ಎಸ್ಮಾ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾರಿಗೆ ನೌಕರರ ಶೇ.8ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಸಿದ್ಧವಿದೆ. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಧ್ಯಕ್ಕೆ ವೇತನ ಹೆಚ್ಚಿಸಲು ಆಗಲ್ಲ ಎಂದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರವಿಕುಮಾರ್, ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಆದರೆ 6ನೇ ವೇತನ ಆಯೋಗ ಜಾರಿಮಾಡಲು ಸಾಧ್ಯವಿಲ್ಲ. ನೌಕರರ ಶೇ.8ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ ಮಾಡಿದ್ದೇವೆ. ಲಾಕ್ ಡೌನ್ ವೇಳೆ ಸಾರಿಗೆ ಇಲಾಖೆಯಲ್ಲಿ ಹಣವೇ ಇರಲಿಲ್ಲ ಆದರೂ ಸಂಬಳ ಪಾವತಿ ಮಾಡಿದ್ದೇವೆ. ಇಲಾಖೆಗೆ ಪ್ರತಿದಿನ 4 ಕೋಟಿ ನಷ್ಟವುಂಟಾಗುತ್ತಿದೆ. ಆದರೂ ಸಂಬಳ ಪಾವತಿ ಮಾಡುವುದನ್ನು ನಿಲ್ಲಿಸಿಲ್ಲ. ಕೋವಿಡ್ ನಂತಹ ಸಂದರ್ಬದಲ್ಲಿ ಮುಷ್ಕರಕ್ಕೆ ಮುಂದಾಗುವುದು ಸರಿಯಲ್ಲ ಎಂದರು.

ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿ ಇರುವುದರಿಂದ ಈಗ ಸಂಬಳ ಹೆಚ್ಚಿಸಲು ಆಗಲ್ಲ. ಆದರೆ ಸಂಬಳ ಹೆಚ್ಚಿಸಲು ಸರ್ಕಾರ ಬದ್ಧ. ಅನಗತ್ಯ ರಜೆ ಹಾಕಿ ಪ್ರತಿಭಟನೆ ನಡೆಸಿದರೆ ವೇತನ ಕಡಿತ ಅಮಡಲಾಗುವುದು. ಸಾರಿಗೆ ನೌಕರರು ನಾಳೆ ಮುಷ್ಕರಕ್ಕೆ ಮುಂದಾದರೆ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ. ಆದರೆ ಸಂಧಾನನದ ಪ್ರಶ್ನೆ ಇಲ್ಲ. ಪ್ರಚೋದನೆಗೆ ಒಳಗಾಗಿ, ಹಠಕ್ಕೆ ಬಿದ್ದು ಪ್ರತಿಭಟನೆಗೆ ಮುಂದಾದರೆ ಎಸ್ಮಾ ಜಾರಿ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯುಂತಾದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಎರಡು ಕಾರಣದಿಂದ ಮುಷ್ಕರ ಬೇಡ ಎಂದ ಸಚಿವ ಸವದಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button