ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ರಾಜ್ಯಾದ್ಯಂತ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ವಾಪಸ್ ಪಡೆಯಲಾಗಿದ್ದು, ನಾಳೆಯಿಂದ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ಕೋಡಿಹಳ್ಳಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹದ ವೇಳೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಕೋಡಿಹಳ್ಲಿಗೆ ಕರೆ ಮಾಡಿ 10ರಲ್ಲಿ 9 ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದು, ಲಿಖಿತ ಆದೇಶ ಪತ್ರವನ್ನೂ ನೀಡಲಾಗಿದೆ. ಮುಷ್ಕರ ವಾಪಸ್ ಪಡೆಯಬೇಕು ಎಂದು ಮನವಿ ಮಾಡಿದ್ದರು.
ಇದರ ಬೆನ್ನಲ್ಲೇ ಮಾತನಾಡಿದ ಕೋಡಿಹಳ್ಳಿ, ಸರ್ಕಾರಕ್ಕೆ 3 ತಿಂಗಳ ಗಡುವು ನೀಡಲಾಗುವುದು. ಮೂರು ತಿಂಗಳಲ್ಲಿ ಸರ್ಕಾರ ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು. ಸಧ್ಯಕ್ಕೆ ಮುಷ್ಕರ ಅಂತ್ಯವಾಗಿದ್ದು, ನಾಳೆಯಿಂದ ಸಾರಿಗೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ