Latest

ನಾಳೆಯಿಂದ ಬಸ್ ಸಂಚಾರ ಸ್ಥಬ್ಧ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ಸಾರಿಗೆ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದು, ಬಸ್ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.

6ನೇ ವೇತನ ಆಯೋಗದ ವರದಿ ಜಾರಿಗೆ ಸರ್ಕಾರ ಹಿಂದೇಟು ಹಾಕುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಮೇ 4ರವಗೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿದೆ. ಇದರಿಂದ ಆಕ್ರೋಶಗೊಂಡಿರುವ ನೌಕರರು ಮತ್ತೆ ಬೀದಿಗಿಳಿದು ಹೋರಾಟಕ್ಕೆ ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ನಾಳೆಯಿಂದ ಬಿಎಂಟಿಸಿ, ಕೆಎಸ್ಆರ್ ಟಿಸಿ, ಎನ್ ಡಬ್ಲ್ಯೂ ಕೆಆರ್ ಟಿಸಿ, ಎನ್ಇಕೆಆರ್ ಟಿಸಿ ಸಿಬ್ಬಂದಿ ಕುಟುಂಬ ಸಮೇತರಾಗಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ಮನೆಗೆ ಬೆಂಕಿಯಿಟ್ಟು 7 ಜನರ ಸಜೀವದಹನ ಮಾಡಿದ್ದ ವ್ಯಕ್ತಿ ಶವವಾಗಿ ಪತ್ತೆ

Home add -Advt

Related Articles

Back to top button