
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾರಿಗೆ ಸಿಬ್ಬಂದಿಗಳು ಮತ್ತೆ ಸರ್ಕಾರದ ವಿರುದ್ಧ ಸಮರ ಸಾರಿದ್ದು, ನಾಳೆ ಮತ್ತೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಬೆಂಗಳೂರಿನ ಬಿಎಂಟಿಸಿ ಕೇಂದ್ರ ಕಚೇರಿ ಎದುರು ನಾಳೆ ಮಧ್ಯಾಹ್ನ 1 ಗಂಟೆಗೆ ಸಾರಿಗೆ ಸಿಬ್ಬಂದಿಗಳು ಸಿಐಟಿಯು ಸಂಘಟನೆ ನೇತೃತ್ವದಲ್ಲಿ ಎಲ್ಲಾ ಸಂಘಟನೆಗಳು
ಪ್ರತಿಭಟನೆ ನಡೆಸಿ, ಬಿಎಂಟಿಸಿ ಎಂಡಿಗೆ ತಮ್ಮ ಬೇಡಿಕೆಗಳ ಬಗ್ಗೆ ಮನವಿ ಮಾಡಲಿದ್ದಾರೆ.
ಅರ್ಧ ವೇತನ ಸಮಸ್ಯೆ, ವೇತನ ತಾರತಮ್ಯ, ಅಧಿಕಾರಿಗಳ ಕಿರುಕುಳ, ರಜೆ ಸಮಸ್ಯೆ ಬಗೆಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಿಬ್ಬಂದಿ ಮನವಿ ಮಾಡಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ