ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಸಿಎಂ ಬಿ.ಎಸ್.ಯಡಿಯೂರಪ್ಪ ಹಠ ಬಿಟ್ಟು ಕೆಲಸಕ್ಕೆ ಹಾಜರಾಗಿ ಇಲ್ಲವಾದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಸಾರಿಗೆ ನೌಕರರ ಸಮಸ್ಯೆ ಬಗ್ಗೆ ಸರ್ಕಾರ ಮಾತುಕತೆಗೆ ಸಿದ್ಧವಿದೆ. ಹಠಕ್ಕೆ ಬಿದ್ದು ಮುಷ್ಕರ ಮುಂದುವರೆದರೆ ಮುಂದಿನ ಕ್ರಮಕೈಗೊಳ್ಳುತ್ತೇವೆ. ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಮುಷ್ಕರ ಬಿಟ್ಟು ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದ್ದಾರೆ.
ಈ ನಡುವೆ ರಾಜ್ಯ ಸರ್ಕಾರ ಮುಷ್ಕರ ನಿರತ ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗದಿದ್ದರೆ ಅವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದು, 2 ವರ್ಷಗಳ ಹಿಂದೆ ನಿವೃತ್ತರಾಗಿರುವ ನೌಕರರ ಪಟ್ಟಿ ಸಿದ್ಧಪಡಿಸಿದ್ದು, ಅವರನ್ನು ಕರೆಸಿಕೊಳ್ಳುವ ಪ್ಲಾನ್ ಮಾಡಿದೆ ಎಂಬ ಮಾತು ಕೇಳಿಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ