Latest

ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ ನೀಡಿದೆ.

ಸರ್ಕಾರಿ ನೌಕರರಿಗೆ ಸಮಾನವಾಗಿ ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ನಾಳೆಯಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೆಚ್.ಎಂ.ವೆಂಕಟೇಶ್ ಎಂಬುವವರು ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ-ಪಿಐಎಲ್ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, 3 ವಾರಗಳ ಕಾಲ ಸಾರಿಗೆ ನೌಕರರು ಮುಷ್ಕರ ನಡೆಸದಂತೆ ಸೂಚನೆ ನೀಡಿದೆ.

ಮುಷ್ಕರದಿಂದಾಗಿ ಸಾರಿಗೆ ಸೇವೆ ವ್ಯತ್ಯವಾಗಲಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಪ್ರಮುಖವಾಗಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸಧ್ಯಕ್ಕೆ ಮುಷ್ಕರ ನಡೆಸಬಾರದು ಎಂದು ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

Home add -Advt

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮಾರ್ಚ್ 21ರಿಂದ ಮುಷರಕ್ಕೆ ಕರೆ ನೀಡಿದ್ದರು. ಆದರೆ ರಾಜ್ಯ ಸರ್ಕಾರ ಶೇ.15ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ನೀಡಿತ್ತು. ಆದರೆ ಸಮಾನ ಮನಸ್ಕರರ ಸಂಘಟನೆ ಸರ್ಕಾರಿ ನೌಕರರ ವೇತನಕ್ಕೆ ಸರಿಸಮಾನವಾಗಿ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಬೇಕು ಎಂದು ಪಟ್ಟು ಹಿಡಿದಿದ್ದು, ಮುಷ್ಕರಕ್ಕೆ ಕರೆ ನೀಡಿತ್ತು.
Transport employees,strike,high court,break

Related Articles

Back to top button