Latest

ಕೊರೊನಾ ಸ್ಫೋಟ; ಒಂದೇ ಗ್ರಾಮದ 40 ಜನರಿಗೆ ಸೋಂಕು ದೃಢ

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಒಂದೇ ಗ್ರಾಮದ 40 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲುಕಿನ ತಿಮ್ಮನಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ವಾರದ ಹಿಂದೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಅವರ ಶವಸಂಸ್ಕಾರದಲ್ಲಿ ಗ್ರಾಮದ ಜನರು ಕೋವಿಡ್ ನಿಯಮ ಉಲ್ಲಂಘಿಸಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಇದೀಗ ಗ್ರಾಮದ 40 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Home add -Advt

ತಿಮ್ಮನಕೊಪ್ಪಲು ಗ್ರಾಮದಲ್ಲಿ 600 ಜನರಿದ್ದು, 40 ಜನರಲ್ಲಿ ಸೋಂಕು ಹರಡಿದೆ. ಹಾಗಾಗಿ ಮುಂಜಾಗೃತಾ ಕ್ರಮವಾಗಿ ಇಡೀ ಗ್ರಾಮವನ್ನೇ ಸೀಲ್ ಡೌನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ಅವಧಿಯಲ್ಲಿ ಸಿಎಂ ಆಗ್ತೀನಿ ಎಂದ ಉಮೇಶ್ ಕತ್ತಿ

Related Articles

Back to top button