ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದ ಬೆನ್ನಲ್ಲೇ ಕೆಲಸಕ್ಕೆ ಹಾಜರಾಗದ ಸಿಬ್ಬಂದಿಗಳು ಮನೆ ಖಾಲಿ ಮಾಡುವಂತೆ ಸಾರಿಗೆ ನೌಕರರ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿಸಲಾಗುತ್ತಿದೆ.
ಈಗಾಗಲೇ ಮುಷ್ಕರ ನಿರತ ಸಾರಿಗೆ ನೌಕರರಿಗೆ ಕೆಲಸಕ್ಕೆ ಹಾಜರಾಗುವಂತೆ ನೊಟೀಸ್ ನೀಡಿ ಶಿಸ್ತುಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿತ್ತು. ಇದರ ಬೆನ್ನಲ್ಲೇ ಕೆಲಸಕ್ಕೆ ಹಾಜರಾಗದಿದ್ದರೆ ಕಾರ್ಮಿಕ ವಸತಿ ಗೃಹವನ್ನು ಬಿಡಿಸಬೇಕಾಗುತ್ತದೆ ಎಂದು ಉಲ್ಲೇಖಿಸಿರುವ ತಿಳುವಳಿಕೆ ಪತ್ರಗಳನ್ನು ಎನ್ ಡಬ್ಲ್ಯೂ ಕೆ ಎಸ್ ಆರ್ ಟಿಸಿ ನೌಕರರ ಮನೆ ಬಾಗಿಲಿಗೆ ಅಂಟಿಸಲಾಗುತ್ತಿದೆ.
ಹುಬ್ಬಳ್ಳಿ ಗೋಕುಲ ರಸ್ತೆಯಲ್ಲಿರುವ ಸಾರಿಗೆ ನೌಕರರ ವಸತಿ ಗೃಹಗಳಲ್ಲಿ ಮನೆಗಳಿಗೆ ಸಾರಿಗೆ ಇಲಕಹೆಯಿಂದ ಇಂತಹ ನೋಟೀಸ್ ಅಂತಿಸಿರುವುದು ಕಂಡುಬಂದಿದೆ. ಇದರಿಂದ ನೌಕರರ ಕುಟುಂಬ ಸದಸ್ಯರು ಕಂಗಾಲಾಗಿದ್ದು, ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಕ್ಕೇರಿ ಶ್ರೀಗಳ ಆಶೀರ್ವಾದ ಪಡೆದ ಡಿಕೆಶಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ