ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಮುಷ್ಕರವನ್ನು ರಾಜ್ಯಾದ್ಯಂತ ಇನ್ನಷ್ಟು ತೀವ್ರಗೊಳಿಸಲು ಸಿದ್ಧತೆ ನಡೆಸುವ ಸಲುವಾಗಿ ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಗೆ ಆಗಮಿಸಿದ್ದರು.
ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ನೌಕರರು ಹಾಗೂ ರೈತ ಮುಖಂಡರ ಜೊತೆ ಸಭೆ ನಡೆಸುತ್ತಿದ್ದರು. ಸಭೆ ವೇಳೆಯೇ ಪೊಲೀಸರು ಕೋಡಿಹಳ್ಳಿಯವರನ್ನು ವಶಕ್ಕೆ ಪಡೆದಿದ್ದಾರೆ.
ಸ್ಯಾಂಪಲ್ ಟೆಸ್ಟ್ ಕೊಟ್ಟು ಶ್ರೀಶೈಲಂಗೆ ಪಾದಯಾತ್ರೆ ಹೊರಟ ಭಕ್ತರು; 7 ಜನರಲ್ಲಿ ಸೋಂಕು ಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ