Kannada NewsKarnataka NewsNationalPolitics

*ನಾಳೆಯಿಂದ ಸಾರಿಗೆ ನೌಕರರ ಮುಷ್ಕರ: ಮಹತ್ವದ ಸಭೆ ಕರೆದ ಸಿಎಂ*

ಪ್ರಗತಿವಾಹಿನಿ ಸುದ್ದಿ: ವೇತನ ಪರಿಷ್ಕರಣೆ, 20 ತಿಂಗಳ ಹಿಂಬಾಕಿ ವೇತನ ಬಿಡುಗಡೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರು ಸರ್ಕಾರಕ್ಕೆ ಗಡುವು ಕೊಟ್ಟು ನಾಳೆಯಿಂದ  ಬಸ್‌ ಸಂಚಾರ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಸಾರಿಗೆ ನೌಕರರ ಪ್ರತಿಭಟನೆ ಸರ್ಕಾರಕ್ಕೆ ಆತಂಕ ತಂದಿಟ್ಟಿದೆ. ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿಂದು ಸಾರಿಗೆ ನಿಗಮಗಳ ನೌಕರ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಮಹತ್ವದ ಸಭೆ ಕರೆದಿದ್ದಾರೆ. 

ಮಧ್ಯಾಹ್ನ 11:45ಕ್ಕೆ ಗಂಟೆಯ ಸುಮಾರಿಗೆ ಕೆಎಸ್​ಆರ್​ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಹಾಗೂ 12:15ಕ್ಕೆ ಕೆಎಸ್​ಆರ್​ಟಿಸಿ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳ ಜತೆ ಸಭೆ ನಡೆಯಲಿದೆ. 

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೂಡ ಉಪಸ್ಥಿತರಿರಲಿದ್ದು, ಮುಷ್ಕರ ಕೈಬಿಡುವಂತೆ ಸಂಧಾನಕ್ಕೆ ಪ್ರಯತ್ನ ನಡೆಸಲಿದ್ದಾರೆ.

Home add -Advt

Related Articles

Back to top button