
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬುರ್ಖಾಧಾರಿ ಮಹಿಳೆಗೆ ಡ್ರಾಪ್ ನೀಡಿದ್ದಕ್ಕೆ ಬೈಕ್ ಸವಾರನಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಮಹಿಳೆಗೆ ಡ್ರಾಪ್ ಕೊಟ್ಟಿದ್ದಕ್ಕೆ ಬೈಕ್ ಸವಾರನನ್ನು ಹಿಡಿದು ಥಳಿಸಿದ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಹಲ್ಲೆ ನಡೆಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಕೋರರ ವಿರುದ್ಧ ಪ್ರಕರಣ ದಾಖಲಾಗಿದೆ. ನನ್ನ ಸರ್ಕಾರ ಇಂಥ ಘಟನೆಗಳನ್ನು ಸಹಿಸಲ್ಲ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಬುರ್ಖಾಧಾರಿ ಮಹಿಳೆಗೆ ಬೈಕ್ ಸವಾರ ಡ್ರಾಪ್ ನೀಡಿದ ಕಾರಣಕ್ಕೆ ಅನ್ಯಕೋಮಿನ ಯುವಕರು ಬೆಂಗಳೂರಿನ ಡೈರಿ ಸರ್ಕಲ್ ಫ್ಲೈ ಓವರ್ ಬಳಿ ಬೈಕ್ ಸವಾರನನ್ನು ತಡೆದು ಥಳಿಸಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದತೆ ಎಚ್ಚೆತ್ತ ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸರು ಹಲ್ಲೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಐವರ ಸಾವು ಪ್ರಕರಣ; ಸ್ಫೋಟಕ ರಹಸ್ಯ ತೆರೆದಿಟ್ಟ 3 ಡೆತ್ ನೋಟ್ ಗಳು