Belagavi NewsBelgaum NewsKarnataka News

*ಹಿರಿಯ ನಾಗರಿಕರೊಂದಿಗೆ ಗೌರವ, ಸೌಜನ್ಯದಿಂದ ವರ್ತಿಸಿ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್*

ಪ್ರಗತಿವಾಹಿನಿ ಸುದ್ದಿ: ಸರಕಾರಿ ಕಚೇರಿಗಳಿಗೆ ಆಗಮಿಸುವ ಹಿರಿಯ ನಾಗರಿಕರೊಂದಿಗೆ ಗೌರವ ಹಾಗೂ ಸೌಜನ್ಯದೊಂದಿಗೆ ವರ್ತಿಸುವುದರ ಜೊತೆಗೆ ಅವರ ಕಾರ್ಯಗಳಿಗೆ ಪ್ರಥಮಾದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ (ಮೇ.14) ಜರುಗಿದ ಹಿರಿಯ ನಾಗರಿಕರ ಕುಂದು ಕೊರತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಿರಿಯ ನಾಗರಿಕರಿಗಾಗಿ ಇರುವಂತಹ ಯೋಜನೆಗಳ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳುವದರ ಮೂಲಕ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಸೂಚಿಸಿದರು.

ನಗರದ ಹೊರವಲಯಗಳಲ್ಲಿ ವಾಸಿಸುವ ಹಿರಿಯ ನಾಗರಿಕ ದಂಪತಿಗಳ ಮಾಹಿತಿ ಪಡೆದು ಅವರಿಗೆ ಸೂಕ್ತ ರಕ್ಷಣೆ ನೀಡಬೇಕು. ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗಾಗಿ ಜಾರಿಯಲ್ಲಿರುವ ಕಾನೂನುಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು.

Home add -Advt

ಉಪವಿಭಾಗಗಳಲ್ಲಿ ರಚಿಸಲಾಗಿರುವ ನ್ಯಾಯಮಂಡಳಿಗಳಲ್ಲಿ ದಾಖಲಾಗಿರುವ ದೂರುಗಳನ್ನು ಶೀಘ್ರವಾಗಿ ಇತ್ಯರ್ಥ ಪಡಿಸಲು ಕ್ರಮವಹಿಸಬೇಕು. ಹಿರಿಯ ನಾಗರಿಕರ ದೂರುಗಳಿಗೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿ, ತಹಶೀಲ್ದಾರಗಳ ಹಂತದಲ್ಲಿ ಹೊರಡಿಸಲಾಗುವ ಆದೇಶಗಳನ್ನು ಪಾಲನೆ ಮಾಡದೆ ಇದ್ದಲ್ಲಿ ಅಂತಹವರ ಮೇಲೆ ದೂರು ದಾಖಲಿಸಬೇಕು.

ಬ್ಯಾಂಕುಗಳಲ್ಲಿ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಕೌಂಟರಗಳನ್ನು ತೆರೆಯಲಾಗಿರುತ್ತದೆ. ಒಂದು ವೇಳೆ ಯಾವುದೇ ಬ್ಯಾಂಕುಗಳಲ್ಲಿ ಪ್ರತ್ಯೇಕ ಕೌಂಟರಗಳು ಕಾರ್ಯನಿರ್ವಹಿಸದೇ ಇದ್ದಲ್ಲಿ ಅಂತಹ ಬ್ಯಾಂಕುಗಳಲ್ಲಿ ಹಿರಿಯ ನಾಗರಿಕರಿಗೆ ಪ್ರಥಮಾದ್ಯತೇ ನೀಡಬೇಕು. ಹಿರಿಯ ನಾಗರಿಕರು ಬ್ಯಾಂಕುಗಳಲ್ಲಿ ದೊಡ್ಡ ಮೊತ್ತ ಡ್ರಾ ಮಾಡುವ ಸಂದರ್ಭದಲ್ಲಿ ಬ್ಯಾಂಕಿನ ಕ್ಯಾಶಿಯರಗಳು ಹಿರಿಯ ನಾಗರಿಕರು ಹಣದೊಂದಿಗೆ ಸುರಕ್ಷಿತವಾಗಿ ತೆರಳುವ ಕುರಿತು ಮೂಡಿಸಲು ತಿಳಿಸುವಂತೆ ಸೂಚಿಸಿದರು. ಜಾಗೃತಿ ಹಿರಿಯ ನಾಗರಿಕರ ಕುಂದು ಕೊರತೆ ಸಭೆಯನ್ನು ಪ್ರತಿ ಮೂರು ತಿಂಗಳುಗಳಿಗೊಮ್ಮೆ ನಿಯಮಿತವಾಗಿ ಜರುಗಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ರಾಜ್ಯ ಹಿರಿಯ ನಾಗರಿಕರ ಅಸೋಸಿಯೇಶನ್ ಅಧ್ಯಕ್ಷರಾದ ವಾಯ್.ಎಂ.ಬೆಂಡಿಗೇರಿ ಅವರು ಮಾತನಾಡಿ, ನಗರದಲ್ಲಿನ ಆಸ್ತಿ ವಿವಾದ, ಹಿರಿಯ ನಾಗರಿಕರ ಸಮಸ್ಯೆಗಳಿಗೆ ಪರಿಹಾರ, ವಿವಿಧ ಇಲಾಖೆಗಳಲ್ಲಿ ಹಿರಿಯ ನಾಗರಿಕರಿಗೆ ಗೌರವ ಅಗತ್ಯ ಮಾಹಿತಿ ನೀಡದೆ ಇರುವ ಪ್ರತಿವರ್ಷ ಅಕ್ಟೋಬರ್ ಮಾಹೆಯಲ್ಲಿ ಜಿಲ್ಲಾಮಟ್ಟದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ, ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ, ಬ್ಯಾಂಕುಗಳಲ್ಲಿ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಕೌಂಟರ ತೆರೆಯುವ, ಸರಕಾರಿ ಬಸಗಳಲ್ಲಿ ಆಸನಗಳ ವ್ಯವಸ್ಥೆ, ಪಿಂಚಣಿ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಹೆಚ್ಚುವರಿ ಪೋಲಿಸ್ ಅಧೀಕ್ಷಕರಾದ ಆರ್.ಬಿ.ಬಸರಗಿ, ಬೆಳಗಾವಿ, ಬೈಲಹೊಂಗಲ, ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳು, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್, ವಿವಿಧ ಇಲಾಖೆಗಳ ಅಧಿಕಾರಿಗಳು, ರಾಜ್ಯ ಹಿರಿಯ ನಾಗರಿಕರ ಅಸೋಸಿಯೇಶನ್ ಜಿಲ್ಲಾ ಅಧ್ಯಕ್ಷರಾದ ಡಾ. ಬಿ.ಎಂ.ಗೋಮಾಡೆ. ಮಲ್ಲೇಶ ಚೌಗಲೆ ಸೇರಿದಂತೆ ಹಿರಿಯ ನಾಗರಿಕರು, ಉಪಸ್ಥಿತರಿದ್ದರು.

Related Articles

Back to top button