Belagavi NewsBelgaum News
*ಬೈಕ್ ಮೇಲೆ ಬಿದ್ದ ಮರ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ; ಓರ್ವನ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಬಿರುಗಾಳಿ ಮಳೆಯಿಂದಾಗಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗುಂದಿ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಬೈಕ್ ಮೇಲೆ ಮರ ಬಿದ್ದಿದ್ದು, ಮೂವರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ.
ಕರ್ಲೆ ಗ್ರಾಮದ ಸೋಮನಾಥ ಮುಚ್ಚಂಡಿಕರ್ (21), ವಿಠಲ ತಳವಾರ ಮೃತ ದುರ್ದೈವಿಗಳು. ಸ್ವಪ್ನಿಲ್ ದೇಸಾಯಿ ಎಂಬಾತ ಗಂಭೀರವಾಗಿ ಗಯಗೊಂಡಿದ್ದು, ಚಿಕಿತ್ಸೆ ಮುಂದುವರೆದಿದೆ.
ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
