Kannada NewsKarnataka NewsLatest

*ಚಾರಣ ಪ್ರಿಯರಿಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಚಾರಣ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಆನ್ ಲೈನ್ ಬುಕ್ಕಿಂಗ್ ಇಲ್ಲದ ಎಲ್ಲಾ ಚಾರಣ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಆನ್ ಲೈನ್ ಬುಕಿಂಗ್ ಇಲ್ಲದ ರಾಜ್ಯದ ಚಾರಣ ತಾಣಗಳಿಗೆ ಭೇಟಿಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಆನ್ ಲೈನ್ ಬುಕಿಂಗ್ ವ್ಯವಸ್ಥೆ, ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಪ್ರಮಾಣಿತ ಕಾರ್ಯವಿಧಾನ-SOP ಬರುವವರೆಗೆ ನಿರ್ಬಂಧ ಹೇರಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ವಾರಾಂತ್ಯದಲ್ಲಿ ಹಾಗೂ ರಜಾ ದಿನಗಳಲ್ಲಿ ಗಿರಿ ಶಿಖರಗಳಿಗೆ ಚಾರಣಕ್ಕೆ ತೆರಳುವವರ ಸಂಖ್ಯೆ ಹೆಚ್ಚುತ್ತಿದ್ದು, ಅಲ್ಲದೇ ಅರಣ್ಯದ ಅಂಚಿನ ಗ್ರಾಮ ಹಾಗೂ ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಪ್ಲಾಸ್ಟಿಕ್, ಬಾಟಲ್ ಗಳು, ತ್ಯಾಜ್ಯ ವಸ್ತುಗಳನ್ನು ಮನಸೋ ಇಚ್ಛೆ ಎಸೆಯುತ್ತಿರುವುದು ಅರಣ್ಯ ಸಂಪತ್ತಿಗೆ ತೊಂದರೆಯಾಗುತ್ತಿದೆ. ಅಲ್ಲದೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಮಾರ ಪರ್ವತಕ್ಕೆ ಟ್ರೆಕಿಂಗ್ ಗೆ ಸಾವಿರಾರು ಜನರು ಏಕಾಏಕಿ ಆಗಿಮಿಸಿದ್ದರು. ಇದರಿಂದಾಗಿ ಅರಣ್ಯ ಪ್ರದೇಶಕ್ಕೆ ತೊಂದರೆ ಆಗಿದೆ ಎಂದು ಹೇಳಲಾಗಿತ್ತು. ಸಾವಿರಾರು ಜನರು ಒಮ್ಮೆಲೇ ಚಾರಣಕ್ಕೆ ಆಗಮಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಆನ್ ಲೈನ್ ಬುಕ್ಕಿಂಗ್ ಇಲ್ಲದ ರಾಜ್ಯದ ಚಾರಣ ತಾಣಗಳಿಗೆ ಸರ್ಕಾರ ತಾತ್ಕಾಲಿಕ ನಿರ್ಬಂಧ ವಿಧಿಸಿದ್ದು, ಹೊಸ ನಿಯಮ ಜಾರಿಗೆ ಮುಂದಾಗಿದೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button