Belagavi NewsBelgaum NewsKannada NewsKarnataka News

*ಎಂ.ಕೆ.ಹೆಗಡೆಯವರಿಗೆ ಸನ್ಮಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ವಾಣಿಜ್ಯೋದ್ಯಮ ಸಂಘದ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ರಂಗಸೃಷ್ಟಿ ತಂಡದಿಂದ ಮತ್ತು ದಾನಮ್ಮ ದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಹಿರಿಯ ಪತ್ರಕರ್ತ, ಪ್ರಗತಿವಾಹಿನಿ ಸುದ್ದಿ ಮುಖ್ಯಸ್ಥ ಎಂ.ಕೆ.ಹೆಗಡೆ ಅವರನ್ನು ಸನ್ಮಾನಿಸಲಾಯಿತು. 

ದಾನಮ್ಮ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಬೆಂಬಳಗಿ, ರಂಗಸೃಷ್ಟಿ ಅಧ್ಯಕ್ಷ ರಮೇಶ ಜಂಗಲ್ ಎಂ.ಕೆ. ಹೆಗಡೆಯವರನ್ನು ಸನ್ಮಾನಿಸಿದರು.

ಹಿರಿಯ ಸಾಹಿತಿಗಳಾದ ಡಾ.ರಾಮಕೃಷ್ಣ ಮರಾಠೆ, ಶಿರೀಶ ಜೋಶಿ, ಶೈಲಜಾ ಬಿಂಗೆ, ರಂಗಸೃಷ್ಟಿ ಮತ್ತು ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ಕಲಾವಿದರು ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button