Kannada NewsLatestNational
*ಟೈರ್ ಬ್ಲಾಸ್ಟ್ ಆಗಿ ಡಿಕ್ಕಿ ಹೊಡೆದ ಕಾರು: ನಾಲ್ವರು ಕನ್ವಾರ್ ಯಾತ್ರಿಗರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕನ್ವಾರ್ ಯಾತ್ರಿಕರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯಾತ್ರಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಧ್ಯಪ್ರದೇಶದ ಶಿತ್ಲಾ ಮಾತಾ ತಿರಹಾ ಬಳಿ ಈ ಘಟನೆ ನಡೆದಿದೆ. ಕಾರಿನ ಟೈರ್ ಸ್ಫೋಟಗ್ಪ್ಂಡ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಕನ್ವಾರ್ ಯಾತ್ರಿಕರಿಗೆ ಡಿಕ್ಕಿ ಹೊಡೆದಿದೆ. ದುರಂತದಲ್ಲಿ ನಾಲ್ವರು ಯಾತ್ರಿಕರು ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.