ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ರೈತರಿಗೆ ತೊಂದರೆ; ಸೋಮವಾರ ಪ್ರತಿಭಟನೆ – ಜೊಲ್ಲೆ
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದಾಗಿನಿಂದ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ರೈತರು ತೊಂದರೆ ಪಡುವಂತಾಗಿದೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಆರೋಪಿಸಿದ್ದಾರೆ.
ರೈತರ ಕಷ್ಟದಲ್ಲಿ ಭಾಗಿಯಾಗಿ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಎಲ್ಲ ರೈತರ ಪರವಾಗಿ ಸೋಮವಾರ ದಿನಾಂಕ 16-10-2023 ರಂದು ಮುಂಜಾನೆ 10 ಗಂಟೆಗೆ ಚಿಕ್ಕೋಡಿಯಲ್ಲಿ ಬ್ರಹತ್ ಪ್ರತಿಭಟನೆ ನಡೆಸಲಾಗುವುದು. ಎಲ್ಲ ರೈತರು ಉಪಸ್ಥಿತರಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ಈಗಾಗಲೇ ಅಲ್ಪ ಸ್ವಲ್ಪ ಮಳೆಯಿಂದ ಬೆಳೆದ ಬೆಳೆಯನ್ನು ಉಳಿಸಿಕೊಳ್ಳಲು ಸಮರ್ಪಕವಾಗಿ ವಿದ್ಯುತ್ ಪೂರೈಕೆ ಇಲ್ಲದೇ ಇರುವುದರಿಂದ ಕೊಳವೆಬಾವಿ, ಬಾವಿಯಲ್ಲಿ ನೀರಿದ್ದರೂ ಜನರಿಗೆ, ದನ ಕರುಗಳಿಗೆ ಕುಡಿಯಲು, ಬೆಳೆಗೆ ನೀರು ಹಾಯಿಸಲಾಗದ ಪರಿಸ್ಥಿತಿ ಅನ್ನದಾತರದ್ದಾಗಿದೆ. ಆದರಲ್ಲೂ ಕಳೆದ 15 ದಿನಗಳಿಂದ ವಿದ್ಯುತ್ ಕಣ್ಣಾಮುಚ್ಚಾಲೆ ವಿಪರೀತವಾಗಿದ್ದು, ಬೆಳೆ ಬಾಡಿ ಹೋಗುತ್ತಿದೆ. 5 ಗ್ಯಾರಂಟಿಗಳನ್ನು ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ಮೈರೆತು ಕುಳಿತಿದ್ದು, ಇನ್ನುಳಿದ ಸಮಸ್ಯೆಗಳ ಕುರಿತು ಕಾಂಗ್ರೆಸ್ ಸರ್ಕಾರ ಖ್ಯಾರೆ ಎನ್ನುತ್ತಿಲ್ಲ” ಎಂದು ರಾಜ್ಯ ಸರ್ಕಾರದ ವಿರುದ್ಧ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ